Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶ ಉಳಿಸಿ ಸಂಕಲ್ಪ ಯಾತ್ರೆ ಇಂದು
(ರಾಜ್ಯ ) ಜಿಲ್ಲೆ

ದೇಶ ಉಳಿಸಿ ಸಂಕಲ್ಪ ಯಾತ್ರೆ ಇಂದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ನಗರದ ಬೆಂಗಳೂರು ರೆಸ್ಟೋರೆಂಟ್ ಹಾಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಏಪ್ರಿಲ್ ೦೭ರಂದು ದೇಶ ಉಳಿಸಿ ಸಂಕಲ್ಪ ಯಾತ್ರೆ ನಡೆಯುತ್ತದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಾಥ ಪೂಜಾರ್ ಅವರು ಹೇಳಿದರು. ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಅಂಬೇಡ್ಕರ ಸರ್ಕಲ ವರೆಗೊ ರ‍್ಯಾಲಿ ನಡೆಯುವುದು. ಬರಲಿರುವ ಲೋಕಸಭಾ ಚುನಾವಣೆಗಳು ಮುಂದಿನ ೫ ವರ್ಷಗಳ ಕಾಲ ನಮ್ಮನ್ನು ಯಾರು ಆಳಬೇಕು ಎಂಬುದನ್ನು ತೀರ್ಮಾನಿಸುವ ಚುನಾವಣೆ ಮಾತ್ರವಾಗಿರದೆ, ಈ ದೇಶ ಪ್ರಜಾತಂತ್ರ ವ್ಯವಸ್ಥೆಯಡಿ ಇರಬೇಕಾ, ಸರ್ವಾಧಿಕಾರಕ್ಕೆ ಒಳಗಾಗಬೇಕಾ ಎಂಬುದನ್ನು ನಿರ್ಧರಿಸುವ ಚುನಾವಣೆಯಾಗಿದೆ ಎಂದು ಡಿ ವಿ ಪಿ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಾಥ ಪೂಜಾರಿ ಹೇಳಿದರು. ದೇಶ ಅವನತಿಯ ಅಂಚಿಗೆ ಬಂದು ನಿಂತಿದೆ. ಈ ಅವನತಿಯಿಂದ ದೇಶವನ್ನು ಸಂರಕ್ಷಿಸಿಕೊಳ್ಳಲು ಸಂಕಲ್ಪ ಜಾಥ ಪ್ರಾರಂಭವಾಗಿದೆ, ಈ ಯಾತ್ರೆಯ ವಿವರ, ಗುರಿ, ಉದ್ದೇಶಗಳ ಬಗ್ಗೆ ಅತಿ ಹೆಚ್ಚಿನ ಪ್ರಚಾರ ನೀಡಬೇಕೆಂದು ತಮ್ಮಲ್ಲಿ ಕೋರುತ್ತೇವೆ.
ಯಾತ್ರೆಯ ವಿವರ: ಕರ್ನಾಟಕದ ಸಮಸ್ತ ಜನಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ ೧ರಿಂದ ಚಾಲನೆ ಪಡೆದಿರುವ ದೇಶ ಉಳಿಸಿ ಸಂಕಲ್ಪ ಯಾತ್ರೆ, ಮೂರು ವಾಹನಗಳಲ್ಲಿ, ಮೂರು ಮಾರ್ಗಗಳಲ್ಲಿ ಚಲಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಹಾಯ್ದು ಏಪ್ರಿಲ್ ೮ ರಂದು ಬೆಳಗಾವಿ ತಲುಪಲಿದೆ. ಅಲ್ಲಿ ದೇಶ ಉಳಿಸಿ ಸಂಕಲ್ಪ ಸಮಾವೇಶ ಜರುಗಲಿದೆ. ಅದರಲ್ಲಿ ನಾಡಿನ ಎಲ್ಲಾ ಸಂಘಟನೆಗಳ, ಸಮುದಾಯಗಳ, ಸಾಹಿತ್ಯ – ಸಾಂಸ್ಕೃತಿಕ ವಲಯದ ಮುಂದಾಳುಗಳು ಸಮಾಗಮಗೊಳ್ಳಲಿದ್ದಾರೆ. ಈ ದೇಶವನ್ನು ಸರ್ವಾಧಿಕಾರದಿಂದ, ದ್ವೇಷರಾಜಕಾರಣದಿಂದ ಸುಲಿಗೆಕೋರ ನೀತಿಗಳಿಂದ ಕಾಪಾಡಿಕೊಳ್ಳುವ ಪಣ ತೊಡಲಾಗುತ್ತದೆ.
ಹಿನ್ನೆಲೆ: ರಾಜ್ಯದ ಸಾಹಿತಿ, ಚಿಂತಕರು, ಹೋರಾಟಗಾರರ ನಡುವೆ ಜನವರಿ, ಫೆಬ್ರವರಿ ತಿಂಗಳುಗಳಲ್ಲಿ ಹಲವು ಸಮಾಲೋಚನಾ ಸಭೆಗಳು ನಡೆದವು. ಬರಲಿರುವ ಚುನಾವಣೆಗಳ ಗಂಭೀರತೆಯ ಬಗ್ಗೆ,, ಈ ಚುನಾವಣೆಗಳಲ್ಲಿ ನಾಗರೀಕ ಸಮಾಜದ ಪಾತ್ರದ ಬಗ್ಗೆ ಆಳವಾದ ಮಂಥನಗಳು ನಡೆದವು. ರಾಜ್ಯವ್ಯಾಪಿಯಾಗಿ ವಿವಿಧ ಸಂಘಟನೆ ಮತ್ತು ವೇದಿಕೆಗಳಡಿ ಸಂವಿಧಾನ ರಕ್ಷಣೆಗಾಗಿ, ಸಹಬಾಳ್ವೆಯ ಮರುಸ್ಥಾಪನೆಗಾಗಿ ಅನೇಕ ಪ್ರಯತ್ನಗಳು ನಡೆಯುತ್ತಿವೆ. ಈ ಎಲ್ಲಾ ಜೀವಪರ ಧಾರೆಗಳ ನಡುವೆ ತಳಮಟ್ಟದಲ್ಲೂ ಸಮರ್ಥ ಸಮನ್ವಯ ರೂಪಗೊಳ್ಳಬೇಕು ಹಾಗೂ ನಾವೆಲ್ಲರೂ ಕೂಡಿ ಒಕ್ಕೊರಲ ಸಂಕಲ್ಪ ತೊಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಎಲ್ಲಾ ಜನಪರ ಶಕ್ತಿಗಳ ನಡುವೆ ಸಮನ್ವಯವನ್ನು ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಜನಪರ ಶಕ್ತಿಗಳ ಐಕ್ಯ ನಿಲುವಿನ ಘೋಷಣೆಗಾಗಿ ಏಪ್ರಿಲ್ ೮ ರಂದು ಬೆಳಗಾವಿಯಲ್ಲಿ ಸಂಕಲ್ಪ ಸಮಾವೇಶ ಜರುಗಲಿದೆ.
ಗುರಿ: ಕರ್ನಾಟಕದಲ್ಲಿ ಅನೇಕ ಜನ ಚಳವಳಿಗಳು, ಸಂಘಟನೆಗಳು, ವೇದಿಕೆಗಳು ಇದ್ದರೂ ನಮ್ಮೆಲ್ಲರ ಗುರಿ ಒಂದೇ ಆಗಿದೆ -ಬರಲಿರುವ ಚುನಾವಣೆಗಳಲ್ಲಿ ಸಂವಿಧಾನ ವಿರೋಧಿ, ಧರ್ಮಾಂಧ, ಸುಲಿಗೆಕೋರ ಬಿಜೆಪಿಯನ್ನು ಸೋಲಿಸುವುದು. ಬಣ್ಣ ಬಣ್ಣದ ಕನಸುಗಳ ಮಹಾಪೂರ ಹರಿಸಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕಳೆದ ೧೦ ವರ್ಷಗಳಲ್ಲಿ ತನ್ನ ನಿಜಬಣ್ಣವನ್ನುತೋರಿಸಿಕೊಂಡಿದೆ, ದೇಶದ ಪರಿಸ್ಥಿತಿಯನ್ನು ಅದೋಗತಿಗೆ ತಂದಿಟ್ಟಿದೆ. ಜನಸಾಮಾನ್ಯರ ಬದುಕನ್ನು ಪಾತಾಳಕ್ಕೆ ತುಳಿದಿದೆ. ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು, ನಿರುದ್ಯೋಗ ಭ್ರಷ್ಟಾಚಾರ ಕಂಪನಿಗಳ ಲೂಟಿ ಜನಸಾಮಾನ್ಯರ ಸುಲಿಗೆ ಆದ ಅನ್ಯಾಯ ಹೆಚ್ಚುತ್ತಿರಿವ ಹಿಂಸೆ ದಮನ ದೌರ್ಜನ್ಯ ಧಾರ್ಮಿಕ ದೇಶದ ಬೆಳವಣಿಗೆಗಳಾಗಿವೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಸ್ಲಂ ಅಭಿವೃದ್ಧಿ ಸಮಿತಿಯ ಮಾಜಿ ಜಿಲ್ಲಾ ಅಧ್ಯಕ್ಷರಾದ ಅಕ್ರಂ ಮಾಶಾಳಕರ, ಜಮಾತೆ ಇಸ್ಲಾಂ ಸ್ಥಾನಿಕ ಅಧ್ಯಕ್ಷರಾದ ಐ ಎನ್ ಹುಲಿಕಟ್ಟಿ, ಎದ್ದೇಳು ಕರ್ನಾಟಕ ಜಿಲ್ಲೆಯ ಕೋಆರ್ಡಿನೇಟರ್ ಮಹಮ್ಮದ್ ಅಬ್ದುಲ್ ಖದಿರ್, ಸ್ಲಂ ಅಭಿವೃದ್ಧಿ ನಗರ ಸಮಿತಿ ಅಧ್ಯಕ್ಷರಾದ ಮುತ್ತಣ್ಣ ಬೋವಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.