ಢವಳಗಿ: ಸಮೀಪದ ಮಡಿಕೇಶ್ವರ ಗ್ರಾಮದಲ್ಲಿ ಶುಕ್ರವಾರದಂದು ಡಾ.ಬಾಬು ಜಗಜೀವನರಾಂ ರವರು ಜಯಂತಿಯನ್ನು ಸಮಾಜದ ಸಮುದಾಯ ಭವನದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮುಖಾಂತರ ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಯುವಕನಾದ ಹಾಗೂ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಕಾರ್ಯದರ್ಶಿಯಾದ ಪ್ರಭು ತಳಗೇರಿ ಅವರು ಮಾತನಾಡಿ, ಭಾರತೀಯ ಕೃಷಿಗೆ ಆಧುನಿಕ ಸ್ಪರ್ಶವನ್ನು ನೀಡಿದ, ಹಸಿರು ಕ್ರಾಂತಿಯ ಹರಿಕಾರ ಎಂದು ಖ್ಯಾತರಾದ ಮುತ್ಸದ್ಧಿ ಡಾ.ಬಾಬು ಜಗಜೀವನ್ ರಾಮ್.ಇವರು
“ಬಾಬೂಜಿ” ಎಂದು ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ದೇಶದ ಆಹಾರ ಕೊರತೆ ನೀಗಿಸುವಲ್ಲಿ ರೈತರಿಗೆ ಹಸಿರು ಕ್ರಾಂತಿ ಮಂತ್ರ ಹೇಳಿಕೊಡುವ ಮೂಲಕ ಡಾ.ಬಾಬು ಜಗಜೀವನರಾಂ ದೇಶದ ಬಹುದೊಡ್ಡ ಶಕ್ತಿಯಾಗಿದ್ದರು. ಜಗಜೀವನ ರಾಮ್ ರವರು ಅಸ್ಪ್ರುಶ್ಯತೆ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಪರಸಪ್ಪ ಪೂಜಾರಿ,ಮುತ್ತು ತಂಬೂರಿ, ಮುತ್ತುರಾಜ್ ತಂಬೂರಿ, ಪ್ರಕಾಶ್ ತಳಗೇರಿ, ರಾಹುಲ್,ಗಣೇಶ ಸೇರಿದಂತೆ ಗ್ರಾಮದ ಯುವಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

