ವಿಜಯಪುರ: ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕ್ರಿಯಾತ್ಮಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚುನಾವಣಾಧಿಕಾರುಗಳು ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ರವಿವಾರದಂದು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ನಗರದ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮತದಾರರ ಪ್ರತಿಜ್ಞಾವಿಧಿ ಕೋಣೆಯ ಉದ್ಘಾಟನೆ ನೇವೇರಿಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಮತದಾನವು ಶೇ.೧೦೦ರಷ್ಟು ಆಗಬೇಕು. ಅದಕ್ಕಾಗಿ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅನೇಕ ಜನರು ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುತ್ತಾರೆ ಅಂತಹವರನ್ನು ಕರೆ ಮಾಡುವ ಮೂಲಕ ಸಂಪರ್ಕಿಸಿ ಅವರಿಗೂ ಸಹ ಮತದಾನದ ಕುರಿತು ಮಾಹಿತಿ ನೀಡಿ ಮತದಾನದಲ್ಲಿ ಭಾಗಿಯಾಗಲು ಪ್ರೇರೇಪಣೆ ನೀಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಮಾತನಾಡಿದರು.
ಜಿಲ್ಲೆಯ ಎಲ್ಲಾ ಜನತೆಗೆ ಮತದಾನ ಮಾಡಲು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಪ್ರಮಾಣ ಹೆಚ್ಚಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ವಿಜಯಪುರ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ರವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾದ ಅಶಾದ ಉರ್ ರೆಹಮಾನ್ ಶರೀಫ್, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳಾದ ಸಿ. ಆರ್. ಮುಂಡರಗಿ, ಉಪಕಾರ್ಯದರ್ಶಿ ಬಿ. ಎಸ್. ಮೂಗನೂರಮಠ, ವಿಜಯಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಹೊಂಗಯ್ಯ, ತಹಶೀಲ್ದಾರರಾದ ಕವಿತಾ, ಜಿ.ಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಎ. ಬಿ ಅಲ್ಲಾಪೂರ, ರಾಜಶೇಖರ ಧೈವಾಡಿ ಜಿಲ್ಲಾ ಅಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿಜಯಪುರ, ಜಿ.ಪಂ. ಸಿಬ್ಬಂದಿಯವರಾದ ಎ.ಎಸ್.ಓ ರಾವ್ ಬಹದ್ದೂರ್ ಬಾಗವಾನ, ಸುರೇಶ ಕೊಂಡಗುಳಿ, ಸುವರ್ಣ ಭಜಂತ್ರಿ ಸೇರಿದಂತೆ ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ತಹಶೀಲ್ದಾರ ಕಾರ್ಯಾಲಯ ಸಿಬ್ಬಂದಿ ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

