ವಿಜಯಪುರ: ಸ್ವಚ್ಚತೆ ಎಂಬುದು ನಾಗರೀಕ ಜೀವನದ ಮೊದಲ ಆದ್ಯತೆಯಾಗಿರಬೇಕು. ನಾವು ವಾಸಿಸುವ ಸ್ಥಳವನ್ನು ಶುಚಿಯಾಗಿ ಇಟ್ಟುಕೊಂಡರೆ ಮಹಾತ್ಮ ಗಾಂಧೀಜಿಯವರ ಆಶಯವಾದ ಸ್ವಚ್ಚ ಭಾರತದ ಪರಿಕಲ್ಪನೆ ಸಾಕಾರವಾಗುತ್ತದೆ. ಹಾಗಾಗಿ ಇನ್ನು ಮುಂದೆ ಪ್ರತಿ ತಿಂಗಳ ಮೊದಲನೇ ಶನಿವಾರವನ್ನು ‘ಸ್ವಚ್ಚ ಶನಿವಾರ’ ಎನ್ನುವ ಪರಿಕಲ್ಪನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಕಾರ್ಯಾಲಯದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಇನ್ನು ಮುಂದೆ ಕಛೇರಿಯಲ್ಲಿ ಸ್ವಚ್ಛ ಶನಿವಾರ ಎಂಬ ಪರಿಕಲ್ಪನೆಯನ್ನು ಪರಿಚಯಿಸುತ್ತಿದ್ದು, ಇದರ ಅಂಗವಾಗಿ ಪ್ರತಿ ತಿಂಗಳ ಮೊದಲನೆಯ ಶನಿವಾರದಂದು ಜಿಲ್ಲಾ ಪಂಚಾಯತಿಯ ಕಾರ್ಯಾಲಯದ ಎಲ್ಲ ಒಳ ಮತ್ತು ಹೊರ ಆವರಣವನ್ನು ಎಲ್ಲ ಅಧಿಕಾರಿಗಳು ಸಿಬ್ಬಂದಿಯವರು ಸ್ವಚ್ಛಗೊಳಿಸುವ ಮೂಲಕ ತಾವು ಇರುವ ಸ್ಥಳವನ್ನು ಶುಚಿಗೊಳಿಸಿ, ಮಾದರಿ ಕಛೇರಿಯನ್ನಾಗಿ ಮಾಡುವ ಸದುದ್ದೇಶದಿಂದ ಜಾರಿಗೊಳಿಸಲಾಗುತ್ತಿದೆ ಎಂದರು.
ಸ್ವಚ್ಛತಾ ಕಾರ್ಯಕ್ಕೆ ಕಛೇರಿಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಪ್ರತಿ ತಿಂಗಳು ಮೊದಲನೇ ಶನಿವಾರದಂದು ಸಮಯಕ್ಕೆ ಸರಿಯಾಗಿ ಹಾಜರಿದ್ದು, ಕಾರ್ಯಾಲಯದ ಸೊಬಗನ್ನು ಹೆಚ್ಚಿಸಲು ನಾವೆಲ್ಲರೂ ಕಾರ್ಯಪ್ರವೃತ್ತರಾಗೋಣ. ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛ ಹಾಗೂ ಸಂರಕ್ಷಣೆ ಮಾಡಿದರೆ ಮಾತ್ರ ನಾವು ಆರೋಗ್ಯವಂತರಾಗಿರಲು ಸಾಧ್ಯ. ಆದ್ದರಿಂದ ಪ್ರತಿ ತಿಂಗಳ ಮೊದಲನೆ ಶನಿವಾರದಂದು ಕಛೇರಿಯನ್ನು ಸ್ವಚ್ಛಗೊಳಿಸಿ ಸುಂದರ ವಾತಾವರಣವನ್ನು ನಿರ್ಮಾಣ ಮಾಡೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿಗಳಾದ ಬಿ. ಎಸ್ ಮೂಗನೂರಮಠ, ಯೋಜನಾ ನಿರ್ದೇಶಕರಾದ ಸಿ. ಆರ್ ಮುಂಡರಗಿ, ಸಹಾಯಕ ಕಾರ್ಯದರ್ಶಿಗಳಾದ ಅನುಸೂಯಾ ಚಲವಾದಿ, ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

