ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಎಸ್.ಸಿ ಘಟಕದ ವತಿಯಿಂದ ಸನ್ಮಾನ
ವಿಜಯಪುರ: ಜಿಲ್ಲಾ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷರು ಹಾಗೂ ಲೋಕಸಭಾ ಅಭ್ಯರ್ಥಿಯಾದ ರಾಜು ಆಲಗೂರ ಅವರು ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಎಸ್.ಸಿ ಘಟಕದ ವತಿಯಿಂದ ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ರಮೇಶ ಗುಬ್ಬೆವಾಡ, ಸಂಘಟನಾ ಕಾರ್ಯದರ್ಶಿ ಮಹಾದೇವ ಚಲವಾದಿ, ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ ಚಲವಾದಿ ಹಾಗೂ ರಜಾಕ ಬಬಲೇಶ್ವರ ಅವರು ಸೇರಿ ಸಂವಿದಾನ ಪೀಠಿಕೆ ನೀಡುವುದರ ಮೂಲಕ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು ಹಾಗೂ ಲೋಕಸಭಾ ಅಭ್ಯರ್ಥಿಯಾದ ರಾಜು ಆಲಗೂರ ಅವರು ಅಧಿಕಾರ ಹಸ್ತಾಂತರ ಮಾಡುವ ವೇಳೆ ‘ಬೇವು-ಬೆಲ್ಲ’ ನೀಡುವುದರೊಂದಿಗೆ ನನಗೆ ಯಾವ ರೀತಿಯಾಗಿ ಜಿಲ್ಲೆಯ ಎಲ್ಲಾ ಕಾಂಗ್ರೆಸಿನ ಮುಖಂಡರು, ಕಾರ್ಯಕರ್ತರು ಬೆಂಬಲ ನೀಡಿದ್ದೀರಿ, ಅದೇ ರೀತಿ ಲೋಣಿ ಅವರಿಗೂ ಬೆಂಬಲ ನೀಡುವದರೊಂದಿಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸುವುದರ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವ ಶತಪ್ರಯತ್ನವನ್ನು ನಾವು ನೀವೆಲ್ಲರೂ ಸೇರಿಕೊಂಡು ಮಾಡೋಣ ಎಂದರು.
ಈ ವೇಳೆ ವಿಠ್ಠಲ ಕಟಕದೊಂಡ ಹಾಗೂ ಹಮ್ಮಿದ ಮುಶ್ರೀಫ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇವಲ ಎಸ್.ಸಿ, ಎಸ್.ಟಿ ಹಾಗೂ ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆಗಳನ್ನು ರೂಪಿಸದೇ ರಾಜ್ಯದ ಸರ್ವಜನಾಂಗದವರಿಗೂ ೫ ಗ್ಯಾರಂಟಿ ಅಭಿವೃದ್ಧಿ ಯೋಜನೆಗಳನ್ನು ತಂದು ಯಶಸ್ವೀಯಾಗಿ ಪ್ರತಿಯೊಬ್ಬರ ಮನೆಗಳಿಗೂ ತಲುಪಿಸಿ ಸರ್ವಾಂಗಿಣ ಅಭಿವೃದ್ದಿಯತ್ತ ರಾಜ್ಯವನ್ನು ಮುನ್ನಡೆಸುತ್ತಿದ್ದೇವೆ, ಇದು ಚುನಾವಣೆಗೆ ಮಾತ್ರ ಸಿಮೀತಗೊಳಿಸದೇ ನಿರಂತರವಾಗಿ ಮಾಡಿಕೊಂಡು ಬಂದಿರುವುದು ಕಾಂಗ್ರೆಸ್‌ನ ಸಾಧನೆಯಾಗಿದೆ, ಅದೇರೀತಿಯಾಗಿ ಲೋಕಸಭಾ ಚುನಾವಣೆಯಲ್ಲಿಯೂ ಜಯಭೇರಿ ಸಾಧಿಸುವ ಅಚಲ ನಂಬಿಕೆ ಇದೆ ಎಂದರು.

