ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ಏಪ್ರಿಲ್ 10 ರಿಂದ ಏಪ್ರಿಲ್ 15ರ ವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಾನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಚಿವರು ಏಪ್ರಿಲ್ 09 ರಂದು ರಾತ್ರಿ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 10 ರಂದು ಬುಧವಾರ ಬೆಳಿಗ್ಗೆ 9.30ಕ್ಕೆ ವಿಜಯಪುರದಿಂದ ಹೊರಟು ಬೆ.10ಕ್ಕೆ ಕಾರಜೋಳಕ್ಕೆ ಆಗಮಿಸಲಿರುವ ಅವರು, ಕೃಷ್ಣಾ ನದಿಯಲ್ಲಿ ಮುಳುಗಿ ಮೃತಪಟ್ಟ ಕಾರಜೋಳ ಗ್ರಾಮದ ಬಾಲಕರಾದ ಸುದೀಪ ದೊಡ್ಡಮನಿ ಹಾಗೂ ಶ್ರೀಧರ ದೊಡ್ಡಮನಿ ಇವರ ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಮಧ್ಯಾಹ್ನ 12ಕ್ಕೆ ಚಡಚಣ ಪಟ್ಟಣಕ್ಕೆ ಆಗಮಿಸಲಿರುವ ಸಚಿವರು, ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿರುವ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 4 ಗಂಟೆಗೆ ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಪಾಟೀಲ ಗಾರ್ಡೇನಿಯಾದಲ್ಲಿ ಆಯೋಜಿಸಲಾಗಿರುವ ನಾಗಠಾಣ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 7 ಗಂಟೆಗೆ ತೊರವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಏಪ್ರಿಲ್ 11 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ರಂಜಾನ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ.
ಏಪ್ರಿಲ್ 12 ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಮುಮ್ಮೆಟಿಗುಡ್ದದ ಬಳಿ ಇರುವ ಅರ್ಜುನ ರಾಠೋಡ ಅವರ ತೋಟದಲ್ಲಿ ಆಯೋಜಿಸಲಾಗಿರುವ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ಅರಕೇರಿ ಜಿ. ಪಂ. ವ್ಯಾಪ್ತಿಯ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಬಿಜ್ಜರಗಿ ಗ್ರಾಮದಲ್ಲಿರುವ ಶ್ರೀ ಸದ್ಗುರು ಶಿವಾನಂದ ಪ್ರಾಥಮಿಕ ಶಾಲೆ ಆವರಣದಲ್ಲಿ ಕನಮಡಿ ಜಿ. ಪಂ. ವ್ಯಾಪ್ತಿಯ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಪಾಲ್ಗೋಳ್ಳಲಿದ್ದಾರೆ. ಸಂಜೆ 6.30ಕ್ಕೆ ತಿಕೋಟಾದಲ್ಲಿ ಹೊನವಾಡ ಜಿ. ಪಂ. ಹಾಗೂ ತಿಕೋಟಾ ಪ. ಪಂಚಾಯಿತಿ ವ್ಯಾಪ್ತಿಯ ಲೋಕಸಭೆ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 9 ಗಂಟೆಗೆ ಬಸವನ ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ಆಯೋಜಿಸಲಾಗಿರುವ ಪೂಜ್ಯ ಶ್ರೀ ಗುರುಸಂಗನಬಸವ ಮಹಾಸ್ವಾಮಿಗಳ ಜನ್ಮ ಸುವರ್ಣ ಮಹೋತ್ಸವ ಕಾರ್ಯಕ್ರದಮಲ್ಲಿ ಪಾಲ್ಗೋಳ್ಳಲಿದ್ದಾರೆ.
ಏಪ್ರಿಲ್ 13 ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ಮಮದಾಪುರ ಜಿ. ಪಂ. ವ್ಯಾಪ್ತಿಯಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವರು ಪಾಲ್ಗೋಳ್ಳಲಿದ್ದಾರೆ. ಸಂಜೆ 4 ಗಂಟೆಗೆ ದೇವರ ಹಿಪ್ಪರಗಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಂಡೆಪ್ಪನ ಸಾಲವಾಡಗಿ ಜಿ. ಪಂ. ವ್ಯಾಪ್ತಿಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಗಂಟೆಗೆ ದೇವರ ಹಿಪ್ಪರಗಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕುದುರಿ ಸಾಲವಾಡಗಿ ಜಿ. ಪಂ. ವ್ಯಾಪ್ತಿಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕೈಗೊಳ್ಳಲಿದ್ದಾರೆ.
ಏಪ್ರಿಲ್ 14 ರಂದು ರವಿವಾರ ಬೆಳಿಗ್ಗೆ 10.30ಕ್ಕೆ ವಿಜಯಪುರ ನಗರದ ಇಂಡಿ ರಸ್ತೆಯಲ್ಲಿ ಶ್ರೀ ಸಿದ್ಧೇಶ್ವರ ಆಸ್ಪತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ.
ಏಪ್ರಿಲ್ 15 ರಂದು ಸೋಮವಾರ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ನಾಮಪತ್ರ ಸಲ್ಲಿಸಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿರುವ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೋಳ್ಳಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಮುಖರೊಂದಿಗೆ ಸಚಿವ ಎಂ. ಬಿ. ಪಾಟೀಲ ಸಭೆ ನಡೆಸಲಿದ್ದಾರೆ ಎಂದು ಸಚಿವರ ಕಚೇರಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

