ವಿಜಯಪುರ: ಸುಭದ್ರ ದೇಶ ನಿರ್ಮಾಣಕ್ಕೆ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಲೋಕಸಭೆ ಚುನಾವಣೆಯನ್ನು ಯಶಸ್ವಿಗೊಳಿಸಿ ಉತ್ತಮ ಆಡಳಿತ ಪಡೆಯಲು ನಾಗರೀಕರ ಸಹಕಾರ ಪ್ರಮುಖವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಅವರು ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಕೇಂದ್ರ ಬಸ್ ನಿಲ್ದಾಣ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣಗಳಲ್ಲಿ ಲೋಕಸಭಾ ಚುನಾವಣೆ ೨೦೨೪ ರ ಹಿನ್ನೆಲೆಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಯಾಣಿಕರೊಂದಿಗೆ ಮಾಹಿತಿ ವಿನಿಮಯ ನೀಡಿ ಮಾತನಾಡಿದರು.
ಚುನಾವಣಾ ಆಯೋಗ ಗುರುತು ಮಾಡಿರುವ ದಾಖಲೆಗಳೊಂದಿಗೆ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಹಿರಿಯರು, ವಿಶಿಷ್ಟ ಚೇತನರಿಗೆ ಪ್ರಥಮ ಪ್ರಾಸ್ತಸ್ಯ ನೀಡಬೇಕು. ಯಾವುದೇ ಗೊಂದಲ ಉಂಟಾಗದಂತೆ ನಾಗರೀಕರು ಶಾಂತರೀತಿಯಿಂದ ಸಹಕರಿಸಿ ಜಿಲ್ಲೆಯಲ್ಲಿ ಶೇ.೧೦೦ ರಷ್ಟು ಮತದಾನ ಆಗುವಂತೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ರವರು ಬಸ್ ನಿಲ್ದಾಣಗಳಲ್ಲಿ ಮತದಾನ ಜಾಗೃತಿ ಕುರಿತ ಪೋಸ್ಟರ್‌ಗಳನ್ನು ಗೋಡೆಗಳ ಮೇಲೆ ಅಂಟಿಸಿದರು. ಇದೇ ವೇಳೆ ಸಾರ್ವಜನಿಕರಿಗೆ, ಯುವ ಮತದಾರರಿಗೆ ಹಾಗೂ ಹಿರಿಯ ನಾಗರಿಕರಿಗೆ ಮತದಾನದ ಜಾಗೃತಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಹಂಚುವ ಮೂಲಕ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯಾದ ಸಿ. ಆರ್ ಮುಂಡರಗಿ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಎ.ಬಿ ಅಲ್ಲಾಪೂರ, ವಿಜಯಪುರ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಕೇಂದ್ರ ಬಸ್ ನಿಲ್ದಾಣ ಅಧಿಕಾರಿ ಜೆ. ಕೆ ಹುಗ್ಗೆಣ್ಣವರ, ಜಿಲ್ಲಾ ಎನ್.ಎಸ್.ಎಸ್ ಘಟಕದ ನೊಡೆಲ್ ಅಧಿಕಾರಿ ಪ್ರಕಾಶ ರಾಠೋಡ, ಜಿ.ಪಂ. ಎಎಸೈ ರಾವ್ ಬಹಾದ್ದೂರ್ ಬಾಗವಾನ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಯಾದಂತಹ ಸಾಕ್ಷಿ ಹಿರೇಮಠ್ ಸೇರಿದಂತೆ ಪ್ರಯಾಣಿಕರು, ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

