ಚಿಮ್ಮಡ: ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸುಖ ಶಾಂತಿ ನೆಮ್ಮದಿ ಪಡೆಯಬೇಕಾದರೆ ಶರಣ ಮಹಾತ್ಮರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.
ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ವಿರಕ್ತ ಮಹಾಸ್ವಾಮಿಗಳ ೩೧ ಪುಣ್ಯಸ್ಮರಣೋತ್ಸವ ಹಾಗೂ ಅಕ್ಕ ಮಹಾದೇವಿ ಜಯಂತಿ ನಿಮಿತ್ಯವಾಗಿ ಅಥಣಿ ಶ್ರೀ ಮುರುಘೇಂದ್ರ ಶಿವಯೋಗಿಗಳವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜೀವನದ ಜಂಝಟಗಳ ನಡುವೆ ಜರ್ಜರಿತವಾದ ಮನುಷ್ಯರಿಗೆ ಈ ಧಾರ್ಮಿಕ ಕಾರ್ಯಕ್ರಮಗಳು ಮಾನಸಿಕ ಸಂತೋಷ ನೀಡುತ್ತವೆ ಸತತವಾಗಿ ಇಂಥಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ನೆಮ್ಮದಿ ಪಡೆಯಬೇಕೆಂದರು.
ಕುಲವಳ್ಳಿ ಸುಕುಮಾರ ಯೋಗಾಶ್ರಮದ ಪ್ರವಚನಕಾರ ಓಂ ಗುರೂಜಿಯವರು ಮುರುಘೇಂದ್ರ ಶಿವಯೋಗಿಗಳವರ ಜೀವನ ದರ್ಶನ ಪ್ರವಚನ ನೀಡಿದರು.
ಇದೇ ಸಂದರ್ಭದಲ್ಲಿ ಅಲ್ಲಮ ಪ್ರಭುದೇವರ ಜಯಂತೋತ್ಸವ ಕಾರ್ಯಕ್ರಮದ ನಿಮಿತ್ತ ತೊಟ್ಟಿಲು ಕಾರ್ಯಕ್ರಮ ಹಮ್ಮಿಕೊಳ್ಲಲಾಗಿತ್ತು.
ಗ್ರಾಮದ ಪ್ರಮುಖರಾದ ರಾಮಣ್ಣ ಮುಗಳಖೋಡ, ಬಾಳಪ್ಪಾ ಹಳಿಂಗಳಿ, ಅಣ್ಣಪ್ಪಗೌಡ ಪಾಟೀಲ, ಗುರಪ್ಪ ಬಳಗಾರ ಗ್ರಾ.ಪಂ ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಪರಪ್ಪಾ ಪಾಲಭಾವಿ, ರಾಚಯ್ಯ ಮಠಪತಿ ಸೇರಿದಂತೆ ಹಲವಾರು ಜನ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

