ವಿಜಯಪುರ: ಮಾರ್ಚ್ ೨೦೨೪ರಲ್ಲಿ ಜರಗಿದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಬುಧವಾರದಂದು ಪ್ರಕಟವಾಗಿದ್ದು ವಿಜಯಪುರ ಜಿಲ್ಲೆ ಒಟ್ಟು ೯೪.೮೯% ಫಲಿತಾಂಶದೊಂದಿಗೆ ರಾಜ್ಯದಲ್ಲಿ ೩ನೇ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾಧಿಕಾರಿ ಟಿ. ಭೂ ಬಾಲನ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರದಂದು ಪ್ರಕಟಗೊಂಡ ಜಿಲ್ಲೆಯ ದ್ವಿತೀಯ ಪಿ ಯು ಸಿ ಫಲಿತಾಂಶ ಕುರಿತು ಮಾತನಾಡಿ ಕಲಾ ವಿಭಾಗದಲ್ಲಿ ೧೬,೨೧೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ೧೪,೧೭೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು ೪,೦೮೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೩,೭೨೫ ವಿದ್ಯಾರ್ಥಿಗಳ ಉತ್ತೀರ್ಣರಾಗಿದ್ದಾರೆ. ಇನ್ನೂ ವಿಜ್ಞಾನ ವಿಷಯದಲ್ಲಿ ೧೧,೫೩೩ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಅದರಲ್ಲಿ ೧೦,೯೪೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು ೫ನೇ ಸ್ಥಾನವನ್ನು ಹೊಂದಿತ್ತು. ಆದರೆ ಈ ವರ್ಷದ ಫಲಿತಾಂಶದಲ್ಲಿ ಸುಧಾರಣೆ ಕಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿರುತ್ತದೆ. ಮುಂದಿನ ವರ್ಷದಲ್ಲಿ ಮೊದಲನೇ ಸ್ಥಾನ ಪಡೆಯಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು. ಜಿಲ್ಲೆಯ ಫಲಿತಾಂಶ ಸುಧಾರಣೆಯಲ್ಲಿ ಶ್ರಮವಹಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಜಯಪುರದ ಎಸ್ ಎಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿಧ್ಯಾರ್ಥಿ ವೇದಾಂತ ನಾವಿ ಪ್ರತಿಶತ ೯೯.೩೩ ಅಂಕಗಳನ್ನು ಪಡೆದು ರಾಜ್ಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿರುವುದು ಸಂತಸ ತಂದಿದೆ ಎಂದರು.
Subscribe to Updates
Get the latest creative news from FooBar about art, design and business.
ದ್ವಿತಿಯ ಪಿಯು ಪರೀಕ್ಷೆ ಫಲಿತಾಂಶ: ವಿಜಯಪುರ ಜಿಲ್ಲೆಗೆ 3ನೇ ಸ್ಥಾನ
Related Posts
Add A Comment

