Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಯುಸಿ ಕಲಾ ವಿಭಾಗ: ಶ್ರೀಲತಾರಾಜ್ಯಕ್ಕೆ ೧೭ನೇಸ್ಥಾನ
(ರಾಜ್ಯ ) ಜಿಲ್ಲೆ

ಪಿಯುಸಿ ಕಲಾ ವಿಭಾಗ: ಶ್ರೀಲತಾರಾಜ್ಯಕ್ಕೆ ೧೭ನೇಸ್ಥಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಬಸವರಾಜ ನಂದಿಹಾಳ
ಬಸವನಬಾಗೇವಾಡಿ: ತಾಲೂಕಿನ ಕರಭಂಟನಾಳ ಗ್ರಾಮದ ರೈತ ನೀಲಕಂಠರಾಯ ಲಿಂಗರೆಡ್ಡಿ ಅವರ ಎರಡನೇ ಸುಪುತ್ರಿ ಶ್ರೀಲತಾ ಲಿಂಗರೆಡ್ಡಿ ಅವಳು ಹೂವಿನಹಿಪ್ಪರಗಿಯ ಎಂ.ಜಿ.ಕೋರಿ ಮತ್ತು ಡಾ.ಬಿ.ಜಿ.ಬ್ಯಾಕೋಡ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿ ಹೂವಿನಹಿಪ್ಪರಗಿಯ ಬಾಲಕಿಯರ ವಸತಿ ನಿಲಯದಲ್ಲಿದ್ದುಕೊಂಡು ನಿರಂತರ ಅಧ್ಯಯನದಿಂದ ಪಿಯುಸಿ ಕಲಾ ವಿಭಾಗದಲ್ಲಿ ೫೯೨ ಅಂಕ(ಶೇ.೯೮.೬೬) ಪಡೆಯುವ ಮೂಲಕ ರಾಜ್ಯಕ್ಕೆ ಹದಿನೇಳನೇ ಸ್ಥಾನ ಪಡೆದುಕೊಂಡು ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾಳೆ.
ಶ್ರೀಲತಾ ಲಿಂಗರೆಡ್ಡಿ ಅವಳು ಇತಿಹಾಸ, ಸಮಾಜಶಾಸ್ತ್ರ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕ, ಕನ್ನಡ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ವಿಷಯದಲ್ಲಿ ೧೦೦ ಕ್ಕೆ ೯೯ ಅಂಕ, ಆಂಗ್ಲ ವಿಷಯಕ್ಕೆ ೧೦೦ಕ್ಕೆ ೯೫ ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಪ್ರಾಥಮಿಕ ಶಾಲೆಯಿಂದಲೂ ನಿರಂತರ ಅಧ್ಯಯನ ಶೀಲತೆ ಬೆಳೆಸಿಕೊಂಡಿದ್ದ ಶ್ರೀಲತಾ ಎಸ್ಎಸ್ಎಲ್ಸಿಯಲ್ಲಿಯೂ ಉತ್ತಮ ಸಾಧನೆಯನ್ನು ಮಾಡಿದ್ದಾಳೆ. ಗ್ರಾಮೀಣ ಭಾಗದಲ್ಲಿದ್ದುಕೊಂಡು ಉತ್ತಮ ಸಾಧನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾಳೆ.
ಶ್ರೀಲತಾ ಲಿಂಗರೆಡ್ಡಿ ಅವಳನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, ನಾನು ಕಾಲೇಜು ಆರಂಭವಾದ ದಿನದಿಂದಲೂ ನಿರಂತರ ಅಧ್ಯಯನ ಮಾಡುತ್ತಿದ್ದೆ. ನನಗೆ ತಂದೆ-ತಾಯಿ, ಕಾಲೇಜಿನ ಎಲ್ಲ ಉಪನ್ಯಾಸಕರು, ವಸತಿ ನಿಲಯದ ಪಾಲಕರು ಸೇರಿದಂತೆ ಎಲ್ಲರೂ ನನ್ನ ಅಧ್ಯಯನಕ್ಕೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ನಾನು ಎರಡು ವರ್ಷಗಳ ಕಾಲ ವಸತಿ ನಿಲಯದಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡಿರುವೆ. ನಾನು ಯಾವುದೇ ವಿಶೇಷ ತರಬೇತಿಗೆ ಹೋಗಿಲ್ಲ. ನಿತ್ಯ ೪-೫ ಗಂಟೆ ಕಾಲ ಅಭ್ಯಾಸ ಮಾಡುತ್ತಿದ್ದೆ. ನಾನು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಳ್ಳಬೇಕೆಂದು ಆಸೆಯನ್ನು ಹೊಂದಿದ್ದೆ. ಇದೀಗ ನಾನು ರಾಜ್ಯದಲ್ಲಿ ೧೭ ನೇ ಸ್ಥಾನ ಪಡೆದುಕೊಂಡಿರುವದು ತುಂಬಾ ಸಂತಸ ತಂದಿದೆ. ಮುಂದೆ ನಾನು ಶಿಕ್ಷಕನಾಗುವ ಗುರಿ ಇಟ್ಟುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಆಸೆಯನ್ನು ಇಟ್ಟುಕೊಂಡಿರುವದಾಗಿ ಹೇಳಿದರು.
ಶ್ರೀಲತಾ ಲಿಂಗರೆಡ್ಡಿ ಅವಳ ತಂದೆ ನೀಲಕಂಠರಾಯ ಲಿಂಗರೆಡ್ಡಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, ನನ್ನ ಮಗಳು ಮೊದಲಿನಿಂದಲೂ ವಿದ್ಯಾಭ್ಯಾಸದಲ್ಲಿ ಚುರುಕುತನ ಹೊಂದಿದ್ದಾಳೆ. ಮೊದಲ ಮಗಳಾದ ಮಧುವತಿ ಸಹ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು. ಈಗ ಎರಡನೇ ಮಗಳು ಸಾಧನೆ ಮಾಡಿದ್ದು ತುಂಬಾ ಖುಷಿ ತಂದಿದೆ. ಅವಳ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಹೇಳಿದರು.
ಎಂ.ಜಿ.ಕೋರಿ ಮತ್ತು ಡಾ.ಬಿ.ಜಿ.ಬ್ಯಾಕೋಡ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಭಜಂತ್ರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, ಶ್ರೀಲತಾ ಲಿಂಗರೆಡ್ಡಿ ಅವಳು ನಿರಂತರ ಅಧ್ಯಯನ ಮಾಡುತ್ತಿದ್ದಳು. ನಮ್ಮ ಕಾಲೇಜಿನ ಎಲ್ಲ ಉಪನ್ಯಾಸಕರು ಇವಳು ಉತ್ತಮ ಸಾಧನೆ ಮಾಡುತ್ತಾಳೆ ಎಂಬ ನಂಬಿಕೆ ಇಟ್ಟುಕೊಂಡಿದ್ದರು. ನಮ್ಮ ನಿರೀಕ್ಷೆಯಂತೆ ಉತ್ತಮ ಸಾಧನೆ ಮಾಡಿದ್ದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.