ತಿಕೋಟಾ: ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುವುದು ಎಲ್ಲ ಮತದಾರರ ಆದ್ಯ ಕರ್ತವ್ಯ ಎಂದು ವಿಜಯಪುರ ಉಪ ವಿಭಾಗಾಧಿಕಾರಿ ಶ್ರೀಮತಿ ಶ್ವೇತಾ ಬಿಡಕರ್ ಹೇಳಿದರು.
ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತಿ, ತಿಕೋಟಾ ವತಿಯಿಂದ ತಿಕೋಟಾ ಪಟ್ಟಣದಲ್ಲಿ ಮತದಾನ ಜಾಗೃತಿ ಅಂಗವಾಗಿ ಹಮ್ಮಿಕೊಂಡ ಬೈಕ್ ರ‍್ಯಾಲಿ ಮತ್ತು ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
೨೦೨೪ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವುದು ಎಲ್ಲ ಮತದಾರರ ಆದ್ಯ ಕರ್ತವ್ಯ ಹೀಗಾಗಿ ಎಲ್ಲ ಅರ್ಹ ಮತದಾರರು ಅಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರು ತಿಳಿಸಿದರು.
ಮತದಾನ ಎನ್ನುವುದು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರಿಗೂ ಮತದಾನದ ಹಕ್ಕಿದೆ, ಅಂದರೆ ಎಲ್ಲಾ ಭಾರತೀಯರು ತಮ್ಮ ಆಯ್ಕೆಯ ಸಂಸದರನ್ನು ಆಯ್ಕೆ ಮಾಡಲು ಮತವನ್ನು ಚಲಾಯಿಸಬೇಕು. ಮತದಾನವು ನಮ್ಮ ದೇಶದ ಭವಿಷ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಪ್ರಮುಖ ನಾಗರಿಕ ಕರ್ತವ್ಯವಾಗಿದೆ. ಮತದಾನವು ರಾಜಕಾರಣಿಗಳನ್ನು ಅವರ ಕಾರ್ಯಗಳಿಗೆ ಜವಾಬ್ದಾರರಾಗಿರಲು ಸಹಾಯ ಮಾಡುತ್ತದೆ ಮತ್ತು ನಮ್ಮ ಪ್ರಜಾಪ್ರಭುತ್ವದ ಚೌಕಟ್ಟನ್ನು ಸೃಷ್ಟಿಸುತ್ತದೆ.
ಕಾರ್ಯಕ್ರಮದ ನೇತೃತ್ವ ವಹಿಸಿದ ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಸಾಲಿ ಮಾತನಾಡಿ, “ಮತದಾನ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ಎಲ್ಲ ಮತದಾರರು ಸಿದ್ಧವಾಗಬೇಕು. ಈಗಾಗಲೇ ಮತದಾನಕ್ಕೆ ಬೇಕದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮತದಾನದ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಮುಖ್ಯವಾಗಿ ಯುವ ಸಮುದಾಯ ಚುನಾವಣೆಯಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಜೊತೆಗೆ ಇತರರಿಗೂ ಮತದಾನದ ಮಹತ್ವವನ್ನು ತಿಳಿಸಿ ಮತದಾನ ಮಾಡಲು ಜಾಗೃತಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್‌ಕುಮಾರ ಭಾವಿದೊಡ್ಡಿ, ತಿಕೋಟಾ ತಹಶೀಲ್ದಾರ ಸುರೇಶ ಮುಂಜೆ, ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಶ್ರೀಮತಿ ಶೋಭಕ್ಕ ಶಿಳೀನ, ತಿಕೋಟಾ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಬಸವರಾಜ ಉಳ್ಳಾಗಡ್ಡಿ, ಎಲ್ಲ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಮಹಾತ್ಮ ಗಾಂಧಿ ನರೇಗಾ ಯೋಜನೆಯ, ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಗಳ ಅಧಿಕಾರಿಗಳು, ಸಿಬ್ಬಂದಿ ಸೇರಿ ಇತರರು ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

