ವಿಜಯಪುರ: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಒಟ್ಟು ಶೇ.೯೪.೮೯% ಫಲಿತಾಂಶ ಪಡೆಯುವ ಮೂಲಕ ವಿಜಯಪುರ ಜಿಲ್ಲೆ ರಾಜ್ಯದಲ್ಲೇ ಟಾಪ್ ಮೂರನೇ ಸ್ಥಾನಕ್ಕೆ ಏರಿದ್ದು ಇಡಿ ಜಿಲ್ಲೆಯೇ ಹೆಮ್ಮೆ ಪಡುವ ಶೈಕ್ಷಣಿಕ ಸಾಧನೆಯಾಗಿದೆ. ಕಲಾ ವಿಭಾಗದಲ್ಲಿ ರಾಜ್ಯಕ್ಕೆ ೧ ನೇ ರ‍್ಯಾಂಕ್ ಪಡೆದ ವೇದಾಂತ ನಾವಿ ಸೇರಿ ಜಿಲ್ಲೆಗೆ ಕೀರ್ತಿ ತಂದ ಎಲ್ಲಾ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ, ಶ್ರಮಿಸಿದ ಎಲ್ಲಾ ಶಿಕ್ಷಕ ಬಳಗ, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಿಯುಸಿ ಕಲಾ ವಿಭಾಗದಲ್ಲಿ ಜಿಲ್ಲೆಯ ವಿದ್ಯಾರ್ಥಿ ವೇದಾಂತ ನಾವಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ಗಳಿಸಿರುವುದು ಇಡಿ ವಿಜಯಪುರಕ್ಕೆ ಹೆಮ್ಮೆಯ ಸಂಗತಿ. ಅಲ್ಲದೇ ಅವರಂತೆ ವಿವಿಧ ವಿಭಾಗಗಳಲ್ಲಿ ಜಿಲ್ಲೆಯ ಸಾಕಷ್ಟು ವಿದ್ಯಾರ್ಥಿಗಳು ಪರಿಶ್ರಮಪಟ್ಟು ಅತ್ಯುತ್ತಮ ಫಲಿತಾಂಶ ಪಡೆದು ಹೆತ್ತವರಿಗೆ, ಶಿಕ್ಷಕರಿಗೆ ಹಾಗೂ ಇಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರೆಲ್ಲರಿಗೂ ಹಾರ್ದಿಕ ಅಭಿನಂದನೆಗಳು.
ಹಾಗೇ ಉತ್ತಮ ಫಲಿತಾಂಶ ಪಡೆಯಲಾಗದ, ವಿಫಲಗೊಂಡ ವಿದ್ಯಾರ್ಥಿಗಳು ಧೈರ್ಯಗೆಡದೇ ಸೋಲನ್ನು ಸವಾಲಾಗಿ ಸ್ವೀಕರಿಸಿ, ಮರಳಿ ಯತ್ನ ಮಾಡುವ ಛಲವಿರಲಿ. ಅನುತ್ತೀರ್ಣತೆ ಎಂದರೆ ಸೋಲಲ್ಲ. ಗೆಲುವಿನ ದಾರಿಯಲ್ಲಿ ಸಾಗುವಾಗ ಕಾಲಿಗೆ ಸಿಕ್ಕ ಕಲ್ಲು ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಬೇಕು. ಅನುತ್ತೀರ್ಣ ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಶಿಕ್ಷಕರು ಸಮಾಲೋಚನೆ ನಡೆಸಿ, ಸೋಲನ್ನು ಸವಾಲಾಗಿ ಸ್ವೀಕರಿಸಿ ಭವಿಷ್ಯದಲ್ಲಿ ಸಾಗಬೇಕಾದ ಹಾದಿಯ ಪರಿಚಯವನ್ನು ಮಾಡಿಕೊಡಬೇಕು ಎಂದು ಸಂಸದ ರಮೇಶ ಜಿಗಜಿಣಗಿ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಇದೇ ವೇಳೆ ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
ಪಿಯುಸಿ ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆ ೩ನೇ ಸ್ಥಾನಕ್ಕೆ ಏರಿಕೆ :ಸಂಸದ ಜಿಗಜಿಣಗಿ ಹರ್ಷ
Related Posts
Add A Comment

