Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ :ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ :ಶಾಸಕ ಯತ್ನಾಳ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ :ಶಾಸಕ ಯತ್ನಾಳ

ವಿಜಯಪುರ: ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತಾವಧಿಯಲ್ಲಿ ದೇಶದಲ್ಲಾದ ಬದಲಾವಣೆ, ಸಾಧನೆ, ಆರ್ಥಿಕ ಸುಧಾರಣೆ, ಜಾಗತಿಕ ಮನ್ನಣೆ, ಭ್ರಷ್ಟಾಚಾರ ರಹಿತ ಆಡಳಿತ ಜನಮನ ಗೆದ್ದು ಇಂದು ಮತ್ತೊಮ್ಮೆ ದೇಶಕ್ಕೆ‌ ಮೋದಿ ಆಡಳಿತ ಬರಬೇಕೆಂಬುದು ಇಡಿ ದೇಶದ ಕೂಗಾಗಿದೆ. ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಪಾಲಿಕೆಯ ಐದು ವಾರ್ಡ್ ಗಳ ವ್ಯಾಪ್ತಿಯ ಪಂಡಿತ ದೀನ್ ದಯಾಳ ಉಪಾಧ್ಯಾಯ ಮಹಾಶಕ್ತಿ ಕೇಂದ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ‌ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಂಗ್ರೆಸ್ಸಿಗರಿಗೆ ಮೋದಿ‌ ಸರ್ಕಾರದ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಸಿಗುತ್ತಿಲ್ಲ. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಭ್ರಷ್ಟಾಚಾರ ರಹಿತ‌ ಆಡಳಿತ, ಅಭಿವೃದ್ಧಿ ಪರ್ವ ಕಾಂಗ್ರೆಸ್ಸಿಗರ ಬಾಯಿ ಕಟ್ಟಿ ಹಾಕಿದೆ. ದೇಶದಲ್ಲಿ ಮೊದಲು‌ 400 ವಿಶ್ವವಿದ್ಯಾಲಯಗಳಿದ್ದವು, ಆದರೆ ಕಳೆದ 10 ವರ್ಷಗಳಲ್ಲಿ 1100 ವಿವಿಗಳಾಗಿವೆ. 41 ವಂದೇ ಭಾರತ್ ರೈಲುಗಳು ಓಡುತ್ತಿವೆ. ಮೆಡಿಕಲ್‌ ಕಾಲೇಜುಗಳ ಸಂಖ್ಯೆ 384 ರಿಂದ 700 ತಲುಪಿವೆ. ದೇಶದಲ್ಲಿ 74 ಇದ್ದ ವಿಮಾನ ನಿಲ್ದಾಣಗಳು ಇಂದು ವಿಜಯಪುರ ಸೇರಿ 154 ವಿಮಾನ ನಿಲ್ದಾಣಗಳಾಗಿವೆ. ಕೇವಲ 5 ನಗರಗಳಲ್ಲಿದ್ದ ಮೆಟ್ರೋ ಇಂದು 20 ನಗರಗಳಲ್ಲಿ ಮೆಟ್ರೋ ಸೇವೆ ಇದೆ. ಯುಪಿಎ ಅವಧಿಯಲ್ಲಿ 96 ಸಾವಿರ ಕಿ.ಮೀ‌ ಇದ್ದ ರಾಷ್ಟ್ರೀಯ ಹೆದ್ದಾರಿ ಇಂದು 1.50 ಲಕ್ಷ‌ ಕಿ.ಮೀ ನಷ್ಟು ಅಭಿವೃದ್ಧಿಯಾಗಿದೆ. 3.75 ಲಕ್ಷ ಕಿ.ಮೀ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗಿವೆ. ಹೀಗೆ ಹತ್ತು ಹಲವು ಅಪರಿಮಿತ ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು.
ನಮ್ಮ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿಯಲ್ಲಿ ಯಾವುದೇ ಒಡಕ್ಕಿಲ್ಲ. ದೇಶದ ರಕ್ಷಣೆ, ಏಲ್ಗೆಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ನಮ್ಮ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಚುನಾವಣೆ ಮಾಡುತ್ತಿದ್ದೇವೆ. ಜಿಲ್ಲೆಯ ಮತದಾರರು ಪ್ರಬುದ್ಧರಾಗಿದ್ದಾರೆ. ವಿಜಯಪುರ ನಗರ ಮತಕ್ಷೇತ್ರದಲ್ಲಿ ಬಿಜೆಪಿ 25 ಸಾವಿರ ಲೀಡ್ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ದೇಶದ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲಾ‌ ಜನತೆ ಮೇ 7 ರಂದು ಜರುಗುವ ಮತದಾನದಲ್ಲಿ ತಪ್ಪದೇ ಪಾಲ್ಗೊಂಡು ಬಿಜೆಪಿಗೆ ಮತ ಹಾಕಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತಯಾಚನೆ ಮಾಡಿದರು.
ಸಂಸದ‌ರು ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಮಾತನಾಡಿ, ಕಳೆದ 65 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ದೇಶದ ಏಳ್ಗೆಗೆ ಏನನ್ನು ಮಾಡದೇ ಕೇವಲ ತಮ್ಮ ಪಕ್ಷ ಹಾಗೂ ತಮ್ಮ ಮನೆ ತುಂಬಿಸಿಕೊಳ್ಳುವ ಕೆಲಸ ಮಾಡಿದ್ದರು‌. ಆದರೆ ಕಳೆದ 10 ವರ್ಷಗಳಲ್ಲಿ ಬಿಜೆಪಿ ಮಾಡಿದ ಸಾಧನೆ ಇಡಿ ವಿಶ್ವವೇ ಮೆಚ್ಚಿಕೊಂಡಿದೆ. ಜಗತ್ತಿನ 5 ಬಲಿಷ್ಠ ಆರ್ಥಿಕ ರಾಷ್ಟ್ರವಾಗಿ ಅಭಿವೃದ್ಧಿ ಹೊಂದಿದೆ. ಬಿಜೆಪಿ‌ ಅವಧಿಯಲ್ಲಿ ವಿಜಯಪುರ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ 1 ಲಕ್ಷ ಕೋಟಿಯಷ್ಟು ಅನುದಾನ ತಂದಿದ್ದೇನೆ. ಜಿಲ್ಲೆಯ ಈ ಹಿಂದಿನ ಯಾವ ಕಾಂಗ್ರೆಸ್ ಸಂಸದರು ಮಾಡಲಾರದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ಇಂಡಿ‌ ಭಾಗದ ಸುಮಾರು‌76 ಹಳ್ಳಿಗಳಿಗೆ 120 ಕೋಟಿ‌ ಅನುದಾನದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ತಂದಿದ್ದೇನೆ.‌ ನಮ್ಮ‌ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರೈಲ್ಚೆ ವ್ಯವಸ್ಥೆ ಅಭಿವೃದ್ಧಿ, ವಿಮಾನ ನಿಲ್ದಾಣ ಹೀಗೆ ಹತ್ತು ಹಲವು ಜನಪರ ಕೆಲಸಗಳಾಗಿವೆ. ಇದು ನನ್ನ ಕಡೆಯ ಚುನಾವಣೆ. ಈ ಹಿಂದೆ ಮೋದಿಯವರು ಎರಡು ಬಾರಿ ಪ್ರಧಾನಿಯಾಗಲು ಜಿಲ್ಲೆಯ ಜನ ನನಗೆ ಕೈ ಎತ್ತಲು ಅವಕಾಶ ಮಾಡಿಕೊಟ್ಟಂತೆ ಮೋದಿಯವರಿಗಾಗಿ 3 ನೇ ಬಾರಿ ಕೈ ಎತ್ತಲು ಜನತೆ‌ ನನಗೆ ಅವಕಾಶ ಮಾಡಿಕೊಂಡಬೇಕೆಂದು ಕೇಳಿಕೊಳ್ಳುತ್ತೇನೆ. ಹಾಗೇ ಇದು ನನ್ನ ಜೀವನದ ಕೊನೆಯಾಸೆ ಎಂದು ಸಂಸದ ರಮೇಶ ಜಿಗಜಿಣಗಿ ಭಾವುಕ ಮಾತುಗಳಾಡಿದರು.
ಈ ವೇಳೆ ಮುಖಂಡರಾದ ವಿವೇಕಾನಂದ ಡಬ್ಬಿ, ಪಾಲಿಕೆ‌‌ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ‌ ಪ್ರ.ಕಾರ್ಯದರ್ಶಿ ಮಳುಗೌಡ ಪಾಟೀಲ, ನಗರ ಮಂಡಲ‌ ಅಧ್ಯಕ್ಷ ಶಂಕರ ಹೂಗಾರ ಹಾಗೂ ಸುರೇಶ್ ಬಿರಾದಾರ್, ಬಸವರಾಜ್ ಬೈಚಬಾಳ, ಪಾಲಿಕೆ ಸದಸ್ಯರಾದ ಎಂ.ಎಸ್.ಕರಡಿ, ಪ್ರೇಮಾನಂದ ಬಿರಾದಾರ, ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಲಕ್ಷ್ಮೀ ಕನ್ನೊಳ್ಳಿ, ರಾಹುಲ್ ಔರಂಗಬಾದ್, ಮಹೇಶ್ ಒಡೆಯರ, ಸುನಿಲ್ ಜೈನಾಪುರ, ಪ್ರಭು ಕೆಂಗಾರ, ಪ್ರವೀಣ್ ಕೂಡ್ಗಿ, ಪಾಪುಸಿಂಗ್ ರಜಪೂತ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.