ವಿಜಯಪುರ: ಇಲ್ಲಿನ ಪುಲಕೇಶಿ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಗಿರೀಶ ಹೆಳವರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ 93 ರಷ್ಟು ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಬಂದಿದ್ದಾನೆ.
ಗಿರೀಶ ಹೆಳವರ ಪತ್ರಕರ್ತ ದೇವೇಂದ್ರ ಹೆಳವರ ಅವರ ಪುತ್ರನಾಗಿದ್ದು, ಪರೀಕ್ಷೆಯಲ್ಲಿ 600 ಕ್ಕೆ 558 ಅಂಕಗಳನ್ನು ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾನೆ.
ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಈ ವಿದ್ಯಾರ್ಥಿಗೆ ಕಾಲೇಜಿನ ಪ್ರಾಚಾರ್ಯರು, ಎಲ್ಲ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

