Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿಗೆ ಸಹಸ್ರಾರು ಪ್ರವಾಸಿಗರ ಲಗ್ಗೆ
(ರಾಜ್ಯ ) ಜಿಲ್ಲೆ

ಆಲಮಟ್ಟಿಗೆ ಸಹಸ್ರಾರು ಪ್ರವಾಸಿಗರ ಲಗ್ಗೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಈದ್ ಉಲ್ ಫಿತ್ರ್ ಹಬ್ಬದ ಮರುದಿನ ಮುಸ್ಲಿಂ ಜನತೆ ತಮ್ಮ ಕುಟುಂಬ ಸಮೇತ ಭೇಟಿ ನೀಡುವುದು ವಾಡಿಕೆ

ಸಂಪದಾ ಹಿರೇಮಠ
ಆಲಮಟ್ಟಿ: ಈದ್ ಉಲ್ ಫಿತ್ರ್ ಹಬ್ಬದ ಮರುದಿನ ಶುಕ್ರವಾರ, ಆಲಮಟ್ಟಿಗೆ ಸಹಸ್ರಾರು ಪ್ರವಾಸಿಗರು ಲಗ್ಗೆ ಇಟ್ಟಿದ್ದರು.
ಈದ್ ಉಲ್ ಫಿತ್ರ್ ಹಬ್ಬದ ಮರುದಿನ ಮುಸ್ಲಿಂ ಜನತೆ ತಮ್ಮ ತಮ್ಮ ಕುಟುಂಬ ಸಮೇತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ವಾಡಿಕೆ. ಕಳೆದ ಒಂದು ದಶಕಗಳಿಂದಲೂ ಆಲಮಟ್ಟಿಗೆ ಹಬ್ಬದ ಮರುದಿನ ಸಹಸ್ರಾರು ಸಂಖ್ಯೆಯ ಜನ ಬರುವುದು ಸಾಮಾನ್ಯವಾಗಿದೆ.
ಹೀಗಾಗಿ ಈ ವರ್ಷವೂ ಆಲಮಟ್ಟಿಯ ಎಲ್ಲಾ ಉದ್ಯಾನಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದವು. ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಪುತ್ಥಳಿಯಿಂದ ಹಿಡಿದು ಆಲಮಟ್ಟಿ ಜಲಾಶಯದವರೆಗೆ ಎರಡು ರಸ್ತೆಯುದ್ದಕ್ಕೂ ಜನವೋ ಜನ ಹಾಗೂ ವಾಹನಗಳ ಭರಾಟೆ ಜೋರಾಗಿತ್ತು. ಅವಳಿ ಜಿಲ್ಲೆ ಸೇರಿದಂತೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಲಮಟ್ಟಿಗೆ ಆಗಮಿಸಿದ್ದರು.
ರೈಲು, ಬಸ್, ಖಾಸಗಿ ವಾಹನಗಳ ಮೂಲಕ ಆಲಮಟ್ಟಿಗೆ ಜನ ಸಂಜೆಯವರೆಗೂ ಬರುತ್ತಿದ್ದವು. ಆಲಮಟ್ಟಿಯ ಲಾಲ್ ಬಹಾದ್ದೂರ ಶಾಸ್ತ್ರಿ ಪುತ್ಥಳಿಯಿಂದ ಡ್ಯಾಂ ವೃತ್ತದವರೆಗೂ ವಾಹನಗಳ ಭರಾಟೆ ಜೋರಾಗಿತ್ತು. ಬೆಳಿಗ್ಗೆಯಿಂದ ರಾಕ್ ಉದ್ಯಾನ, ಕೃಷ್ಣಾ ಉದ್ಯಾನ, ನದಿ ತೀರ, ಲವಕುಶ ಉದ್ಯಾನದತ್ತ ಸಂಚರಿಸಿದರೆ ಸಂಜೆಯಾದೊಡಣೆ ವಿವಿಧ ಕಾರಂಜಿಗಳುಳ್ಳ 77 ಎಕರೆ ಸಮುಚ್ಛಯದ ಉದ್ಯಾನಕ್ಕೆ ಲಗ್ಗೆ ಇಟ್ಟರು.
ಆಲಮಟ್ಟಿಯ ನಾನಾ ಕಡೆ ಪ್ರವಾಸಿಗರು ಕುಳಿತು ತಾವು ತಂದ ಬುತ್ತಿ (ಹಬ್ಬಕ್ಕೆ ಮಾಡಿದ ಮಾಂಸಾಹಾರ ಊಟ) ತೆಗೆದು ಊಟ ಸೇವಿಸುತ್ತಿದ್ದ ದೃಶ್ಯವೂ ಕಂಡು ಬಂತು.
ಉದ್ಯಾನದ ಜೋಕಾಲಿ ಸೇರಿದಂತೆ ನಾನಾ ಕಡೆ ಮಹಿಳೆ, ಮಕ್ಕಳಾದಿಯಾಗಿ ಹಿರಿಯರು ಸಂತಸದಿಂದ ಕಾಲ ಕಳೆದರು. ಎಲ್ಲಾ ಉದ್ಯಾನದ ಕೌಂಟರ್ ಗಳ ಮುಂದೆ ಟಿಕೆಟ್ ಪಡೆಯಲು ದೊಡ್ಡ ಸರದಿ ಕಂಡು ಬಂತು. ಮುಸ್ಲಿಂ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದನ್ನು ಮನಗಂಡಿದ್ದ ಹಲವು ವ್ಯಾಪಾರಿಗಳು ನಾನಾ ಸಂಚಾರಿ ಹೋಟೆಲ್ ತಂದು ನಿಲ್ಲಿಸಿ, ಬಿರಿಯಾನಿ, ಕುಷ್ಕಾ ಮಾರಾಟ ಮಾಡುತ್ತಿರುವುದು ಕಂಡು ಬಂತು. ತಂಪು ಪಾನಿಯಗಳ ವ್ಯಾಪಾರ ಭರಾಟೆಯೂ ಜೋರಾಗಿತ್ತು.
ಹೆಚ್ಚುವರಿ ಪೊಲೀಸ್:
ಹೆಚ್ಚು ಪ್ರವಾಸಿಗರು ಆಗಮಿಸುವುದನ್ನು ಮೊದಲೇ ಅರಿತಿದ್ದ ನಿಡಗುಂದಿ, ಆಲಮಟ್ಟಿ ಹಾಗೂ ಡಿಆರ್ ಪೊಲೀಸರು ಹಾಗೂ ಕೆಎಸ್ ಐಎಸ್ ಎಫ್ ಪೊಲೀಸರು ಜಂಟಿಯಾಗಿ ಭದ್ರತೆ ಒದಗಿಸಿದರು.
ಜತೆಗೆ ಕೆಬಿಜೆಎನ್ ಎಲ್ ಅರಣ್ಯ ಇಲಾಖೆಯ ಡಿಎಫ್ ಓ ನಾಗಶೆಟ್ಟಿ ರಾಜಣ್ಣ, ಆರ್ ಎಫ್ ಓ ಮಹೇಶ ಪಾಟೀಲ ನೇತೃತ್ವದಲ್ಲಿ ಅರಣ್ಯ ದಿನಗೂಲಿಗಳು ಪ್ರವಾಸಿಗರು ವ್ಯವಸ್ಥೆಯಲ್ಲಿ ಸಹಕರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.