ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ಮತ್ತು 10 ನೇ ಸ್ಥಾನದ ಸಾಧನೆ
ಚಡಚಣ: ಪಟ್ಟಣದ ಶ್ರೀ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಮಹಾವಿದ್ಯಾಲಯದ ಒಟ್ಟು ಫಲಿತಾಂಶ 99% ರಷ್ಟು ಆಗಿದೆ. ವಿಜ್ಞಾನ ವಿಭಾಗದ ಫಲಿತಾಂಶ 100% ಆಗಿದ್ದು, ಕಲಾ ಹಾಗೂ ವಾಣಿಜ್ಯ ವಿಭಾಗದ ಫಲಿತಾಂಶ 99% ರಷ್ಟಾಗಿದೆ. ಪರೀಕ್ಷೆಗೆ ಹಾಜರಾದ 394 ವಿದ್ಯಾರ್ಥಿಗಳಲ್ಲಿ 110 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 210 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 50 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 20 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಮಹಾವಿದ್ಯಾಲಯದ ಕಲಾ ವಿಭಾಗದ ವಿದ್ಯಾರ್ಥಿನಿ ಕಾಂಚನಾ ಡೋಣಗಾಂವ 590(98.33%) ಅಂಕಗಳನ್ನು ಪಡೆದು ರಾಜ್ಯಕ್ಕೆ 7 ರ‍್ಯಾಂಕ, ಜಿಲ್ಲೆಗೆ 5 ರ‍್ಯಾಂಕ ಮತ್ತು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಆನಂದ ಅಡಕೆ 589(98.17%) ಅಂಕಗಳನ್ನು ಪಡೆದು ರಾಜ್ಯಕ್ಕೆ 10 ರ‍್ಯಾಂಕ, ಜಿಲ್ಲೆಗೆ 6 ರ‍್ಯಾಂಕ ಮತ್ತು ಕಾಲೇಜಿಗೆ ದ್ವಿತೀಯ ರ‍್ಯಾಂಕ ಪಡೆದಿದ್ದಾನೆ, ವಿಜ್ಞಾನ ವಿಭಾಗದ ಕಸ್ತೂರಿ ಬಿರಾದಾರ 586(97.67%) ಅಂಕಗಳನ್ನು ಪಡೆದು ಕಾಲೇಜಿಗೆ ತೃತಿಯ ಸ್ಥಾನ ಪಡೆದಿದ್ದಾಳೆ.
ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಸ್.ಆರ್. ಡೋಣಗಾಂವ, ಉಪಾಧ್ಯಕ್ಷ ವಿ.ಜಿ. ಮುತ್ತಿನ, ಗೌರವ ಕಾರ್ಯದರ್ಶಿ ವಿ.ಎಸ್.ಗಿಡವೀರ ಹಾಗೂ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಮನೋಜ ಕಟಗೇರಿ ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

