ಸಿಂದಗಿ: ತಾಲೂಕಿನ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೋರಟಗಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮಿತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ೧೦೩ ವಿದ್ಯಾರ್ಥಿಗಳು ಪರೀಕ್ಷೆ ಹಾಜರಿದ್ದು ೧೦೩ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಕಲಾ ವಿಭಾಗದಲ್ಲಿ ರಕ್ಷಿತಾ ಗೋಗಿ ೫೭೯(ಶೇ.೯೮%) ಪ್ರಥಮ, ಆಕಾಶ ಮದರಿ ೫೭೮ (ಶೇ.೯೬.೩೩) ದ್ವಿತೀಯ, ಮಹೇಶ ತಳವಾರ ೫೭೫ (೯೫.೮೩%) ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಉತ್ತಮ ಸಾದನೆಗೆ ಕಾಲೇಜಿನ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

