ಸಿಂದಗಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು ೧೭೩ ಜನ ವಿದ್ಯಾರ್ಥಿನಿಯರಲ್ಲಿ ೫೪ ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, ೧೦೧ ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, ೧೧ ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು ೪೬ ವಿದ್ಯಾರ್ಥಿನಿಯರಲ್ಲಿ ೧೩ ಅತ್ಯುನ್ನತ ಶ್ರೇಣಿ, ೨೮ ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ತೆರ್ಗಡೆಹೊಂದಿದ್ದಾರೆ.
ವಿಜ್ಞಾನ ಭಾಗದಿಂದ ಪರೀಕ್ಷೆಗೆ ಹಾಜರಾದ ೩೩ ವಿದ್ಯಾರ್ಥಿನಿಯರಲ್ಲಿ ೧೦ ಅತ್ಯುನ್ನತ ಶ್ರೇಣಿ, ೨೦ ಪ್ರಥಮ ಶ್ರೇಣಿ, ೦೩ ದ್ವಿತೀಯ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕಾಲೇಜಿನ ಒಟ್ಟು ಫಲಿತಾಂಶ ೧೦೦ಕ್ಕೆ ೧೦೦% ರಷ್ಟಾಗಿರುತ್ತದೆ.
ಭೂಗೋಳಶಾಸ್ತ್ರ ವಿಷಯದಲ್ಲಿ ೩ ಜನ ವಿದ್ಯಾರ್ಥಿನಿಯರು, ರಾಜ್ಯಶಾಸ್ತ್ರ ವಿಷಯದಲ್ಲಿ ಇಬ್ಬರು ವಿದ್ಯಾರ್ಥಿನಿಯರು, ಅರ್ಥಶಾಸ್ತ್ರ, ಶಿಕ್ಷಣಶಾಸ್ತ್ರ, ಇತಿಹಾಸ ವಿಷಯದಲ್ಲಿ ಒರ್ವ ವಿದ್ಯಾರ್ಥಿನಿಯು ೧೦೦ ಕ್ಕೆ ೧೦೦ ಅಂಕಗಳನ್ನು ಪಡೆದುಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಹೀಗೆ ಕಾಲೇಜಿನ ಒಟ್ಟು ಫಲಿತಾಂಶ ೧೦೦ಕ್ಕೆ ೯೬.೪೨% ರಷ್ಟಾಗಿರುತ್ತದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯರಾದ ಎಂ.ಎಸ್.ಹೈಯಾಳಕರ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

