Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯ ಆದರ್ಶ ಬದುಕಿಗೆ ದಾರಿದೀಪ :ಮಲ್ಲಿಕಾರ್ಜುನ ಶ್ರೀ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯ ಆದರ್ಶ ಬದುಕಿಗೆ ದಾರಿದೀಪ :ಮಲ್ಲಿಕಾರ್ಜುನ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ೧೨ ನೇ ಶತಮಾನದ ಬಸವಣ್ಣನವರ ಕಾಲದಲ್ಲಿ ಎಲ್ಲ ಧರ್ಮದವರು ಶರಣರಾಗುವ ಧನ್ಯತೆ ಪಡೆಯುವ ಮೂಲಕ ಅದ್ಭುತವಾದ ಕ್ರಾಂತಿ ನಡೆಯಿತು. ಈ ಕಾಲ ಘಟದಲ್ಲಿ ಬಸವಾದಿ ಶರಣರಿಂದ ರಚನೆಯಾಗಿರುವ ವಚನ ಸಾಹಿತ್ಯ ಎಲ್ಲರಿಗೂ ಆದರ್ಶದ ಬದುಕಿಗೆ ದಾರಿದೀಪವಾಗಿದೆ ಎಂದು ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ತಾಲೂಕಿನ ಅವಿಮುಕ್ತ ಸುಕ್ಷೇತ್ರ ಯರನಾಳ ಗ್ರಾಮದ ವಿರಕ್ತಮಠದ ಕರ್ತೃ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವವನ್ನು ಗುರುವಾರ ಸಂಜೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮದ ಸಮ್ಮುಖ ವಹಿಸಿ ಮಾತನಾಡಿದ ಅವರು, ಬಸವಣ್ಣನವರು ಸಾಮಾಜಿಕ ಕ್ರಾಂತಿಯಿಂದಾಗಿ ತಮ್ಮ ಮಂತ್ರಿ ಸ್ಥಾನವನ್ನು ತ್ಯಾಗ ಮಾಡಬೇಕಾಯಿತು. ವಚನ ಸಾಹಿತ್ಯ ಸಂರಕ್ಷಣೆ ಚನ್ನಬಸವಣ್ಣನವರಿಗೆ ಜವಾಬ್ದಾರಿ ವಹಿಸಿ ತಾವು ಕೂಡಲಸಂಗಮದ ಕಡೆಗೆ ತೆರಳಿದರು. ಚನ್ನಬಸವಣ್ಣನವರು ಸೇರಿದಂತೆ ಅನೇಕ ಶರಣರು ವಚನ ಸಾಹಿತ್ಯದ ಸಂರಕ್ಷಣೆ ಮಾಡಿದರು. ೧೨ ನೇ ಶತಮಾನದಲ್ಲಿ ಧರ್ಮದ ಜ್ಯೋತಿ ಬೆಳಗಿ ನಂತರ ಕೆಲ ವರ್ಷಗಳ ಕಾಲ ಆರಿ ಹೋಯಿತು. ನಂತರ ವಿಜಯನಗರ ಸಾಮ್ರಾಜ್ಯದ ಪ್ರೌಢದೇವರಾಯನ ಕಾಲದಲ್ಲಿ ೧೦೧ ವಿರಕ್ತರಿಂದ ಮತ್ತೆ ವಚನ ಸಾಹಿತ್ಯದ ಜ್ಯೋತಿ ಬೆಳಗಿತು. ನಂತರ ತೋಂಟದ ಸಿದ್ದಲಿಂಗ ಯತಿಗಳು, ನಿಜಗುಣ ಶಿವಯೋಗಿಗಳು, ಮೃತ್ಯುಂಜಯ ಸ್ವಾಮೀಜಿಗಳು ಸೇರಿದಂತೆ ಅನೇಕ ಸ್ವಾಮೀಜಿಗಳು ವಚನ ಸಾಹಿತ್ಯವನ್ನು ನಾಡಿನಲ್ಲಿ ಪಸರಿಸುವ ಕೈಂಕರ್ಯ ಕೈಗೊಂಡರು. ವಚನ ಸಾಹಿತ್ಯದ ಸಂದೇಶ ಎಲ್ಲ ಕಾಲಕ್ಕೂ ಪ್ರಸ್ತುತವಾಗಿದೆ ಎಂದರು.
ಯರನಾಳ ಶ್ರೀಮಠದ ಗುರುಸಂಗನಬಸವ ಸ್ವಾಮೀಜಿಗಳು ಜಾತ್ರೆಯಂಗವಾಗಿ ಅರ್ಥವತ್ತಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಜನಜಾಗೃತಿ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಇವರು ಬಂಥನಾಳ ಶ್ರೀಗಳ ಅವತಾರವೇ ಆಗಿರುವದರಿಂದಲೇ ಈ ಮಠದಲ್ಲಿ ೧೦೦ ವರ್ಷದಲ್ಲಿ ಆಗುವ ಕಾರ್ಯವನ್ನು ೩೦ ವರ್ಷದಲ್ಲಿಯೇ ಮಾಡಿದ್ದಾರೆ. ಇದೀಗ ಶ್ರೀಗಳು ಜನ್ಮಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ನಾಡಿನ ಭಕ್ತರಿಗೆ ಸಂತಸ. ಇವರು ಜನ್ಮಶತಮಾನೋತ್ಸವ ಆಚರಿಸಿಕೊಳ್ಳುವಂತಾಗಲಿ ಎಂದು ಶುಭಹಾರೈಸಿದರು.
ಸಾನಿಧ್ಯ ವಹಿಸಿದ್ದ ಬೆಂಗಳೂರಿನ ವಿಭೂತಿಪುರ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶಿಷ್ಯರ ಸಂಪತ್ತನ್ನು ಹರಣ ಮಾಡುವವರು ನಿಜವಾದ ಗುರುವಲ್ಲ. ಶಿಷ್ಯರ ದುಃಖ, ಸಂಕಷ್ಟ ದೂರಮಾಡುವವರೇ ನಿಜವಾದ ಗುರು. ಭಗವಂತ ನಮಗೆ ಅದ್ಭುತವಾದ ಶಕ್ತಿ ನೀಡಿದ್ದಾನೆ. ಈ ಶಕ್ತಿಯನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಇಡೀ ಸಮಾಜಕ್ಕೆ ಮಾರ್ಗದರ್ಶನ ಮಾಡುವವರ ಆರೋಗ್ಯ ಚೆನ್ನಾಗಿ ಇರಬೇಕು. ಶ್ರೀಮಠದ ಶ್ರೀಗಳು ಧಾರ್ಮಿಕ ಕಾರ್ಯದೊಂದಿಗೆ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ನೀಡುತ್ತಿರುವ ಸೇವೆ ಅನನ್ಯ. ಇವರ ಸೇವೆ ಇಡೀ ಸಮಾಜಕ್ಕೆ ನಿರಂತರವಾಗಿ ಸಿಗುವಂತಾಗಬೇಕು. ಶ್ರೀಗಳು ತಮ್ಮ ಸೇವಾ ಕಾರ್ಯದೊಂದಿಗೆ ತಮ್ಮ ಆರೋಗ್ಯದ ಕಡೆಗೆ ಗಮನ ಇಟ್ಟುಕೊಳ್ಳಬೇಕೆಂದರು.
ಸಾನಿಧ್ಯ ವಹಿಸಿದ್ದ ಶಿವಗಂಗೆಯ ಮೇಲಗವಿಮಠದ ಡಾ.ಮಲೇಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ವೇದಿಕೆಯಲ್ಲಿ ಶ್ರೀ ಅಸೋಸಿಯೇಷನ್ ಅಧ್ಯಕ್ಷ ಡಾ. ಶಿವಾನಂದ ಕೆಲ್ಲೂರ, ಸಾಹಿತಿ ಡಾ.ಸಿದ್ದಣ್ಣ ಉತ್ನಾಳ, ಯರನಾಳ ಗ್ರಾಪಂ ಅಧ್ಯಕ್ಷ ಶಾಂತಾಬಾಯಿ ಕೋಲಕಾರ ಇತರರು ಇದ್ದರು. ಸಿದ್ದಾರ್ಥ ಬೈಚಬಾಳ ಪ್ರಾರ್ಥಿಸಿದರು.
ಡಾ.ಅಮರೇಶ ಮಿಣಜಗಿ ಸ್ವಾಗತಿಸಿದರು. ಗಿರಿಜಾ ಪಾಟೀಲ, ಪುಷ್ಪಾ ಗುಳೇದ, ಶರಣಬಸು ಹಳಮನಿ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ರಾಜೇಸಾಬ ಕೊರಬು, ರೇವಣಸಿದ್ದ ಪ್ಯಾಟಿಗೌಡರ, ಡಾ.ಬಸವರಾಜ ಅಸ್ಕಿ, ಡಾ.ಬಸವರಾಜ ಸಗರನಾಳ ದಂಪತಿಗಳನ್ನು ಆದರ್ಶ ದಂಪತಿಗಳೆಂದು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.