ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಈವರೆಗೆ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರೂ.300 ಕೋಟಿಗೂ ಅಧಿಕ ಮೌಲ್ಯದ ನಗದು, ಮದ್ಯ, ಮಾದಕವಸ್ತು ಹಾಗೂ ಮತದಾರರಿಗೆ ಆಮಿಷವೊಡ್ಡಲು ಬಳಸುವ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 16 ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡ, ಪೊಲೀಸ್ ಅಧಿಕಾರಿಗಳನ್ನೊಳಗೊಂಡಿರುವ ಜಾರಿ ತಂಡಗಳ ಸಮನ್ವಯದಲ್ಲಿ ರೂ. 307.61 ಕೋಟಿ ಮೌಲ್ಯದ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
46.01 ಕೋಟಿ ರೂಪಾಯಿ ನಗದು, 7.73 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳು, 147 ಕೋಟಿ ರೂಪಾಯಿ ಮೌಲ್ಯದ ಮದ್ಯ, 9.75 ಕೋಟಿ ಮೌಲ್ಯದ ಮಾದಕ ವಸ್ತುಗಳು ಮತ್ತು 24.38 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 1,587 ಎಫ್‌ಐಆರ್ ದಾಖಲಿಸಲಾಗಿದೆ.
ಅಬಕಾರಿ ಇಲಾಖೆಯು 2,002 ಗಂಭೀರ ಪ್ರಕರಣ ಹಾಗೂ 2,531 ಮದ್ಯದ ಪರವಾನಗಿ ಉಲ್ಲಂಘನೆ ಪ್ರಕರಣ, 119 ಎನ್‌ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 15 (ಎ) ಅಡಿಯಲ್ಲಿ 12,766 ಪ್ರಕರಣಗಳನ್ನು ದಾಖಲಿಸಿದೆ.ಅಲ್ಲದೆ, 1,214 ವಿವಿಧ ರೀತಿಯ ವಾಹನಗಳನ್ನು ಜಪ್ತಿ ಮಾಡಲಾಗಿದೆ.
Subscribe to Updates
Get the latest creative news from FooBar about art, design and business.
ರಾಜ್ಯದಲ್ಲಿ ರೂ.300 ಕೋಟಿಗೂ ಅಧಿಕ ಮೌಲ್ಯದ ನಗದು, ವಸ್ತುಗಳು ವಶ
Related Posts
Add A Comment

