Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಡಿವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಕುಡಿವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ :ಡಿಸಿ ಟಿ.ಭೂಬಾಲನ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ನೀರಿನ ಸಮಸ್ಯೆ ಉದ್ಭವಿಸುವ ಕಡೆಯಲ್ಲಿ ತುರ್ತಾಗಿ ಅಗತ್ಯ ಕ್ರಮ ಕೈಗೊಂಡು ನೀರು ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶುಕ್ರವಾರ ಸಂಜೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತು ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಧ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಆದ್ಯಾಗೂ ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಸದ್ಭಳಕೆಯೊಂದಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಹೊನಗನಹಳ್ಳಿಯ ೫ ಎಂಎಲ್‌ಡಿ ನೀರು ಸರಬರಾಜು ಸಮಸ್ಯೆ ಕುರಿತು ನಾಳೆಯೇ ಸಂಬಂಧಿಸಿದ ತಹಶೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಇರುವ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ವಿವಿಧೆಡೆ ಎಕ್ಸಟೆನ್‌ಶನ್ ಪ್ರದೇಶ ಹೆಚ್ಚಾಗಿ ನಿರ್ಮಾಣವಾಗುತ್ತಿರುವುದರಿಂದ ನೀರಿನ ಅವಶ್ಯಕತೆ ಹೆಚ್ಚಾಗಲಿದ್ದು, ನೀರಿನ ಅಭಾವವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ವಿಜಯಪುರ ನಗರದಲ್ಲಿರುವ ವಿವಿಧ ಬೊರವೆಲ್‌ಗಳು, ಕೈಪಂಪುಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಒಟ್ಟು ೫೦೨ ಬೊರವೆಲ್‌ಗಳ ಪೈಕಿ ೪೭೬ ಬೊರವೆಲ್‌ಗಳು ಚಾಲ್ತಿಯಲ್ಲಿದ್ದು, ೨೬ ಬೊರವೆಲ್‌ಗಳು ಚಾಲ್ತಿಯಲ್ಲಿರುವುದಿಲ್ಲ. ಬಂದ ಇರುವ ಬೊರವೆಲ್‌ಗಳನ್ನು ಸುಸ್ಥಿತಿಗೆ ತರಲು ಪ್ರಯತ್ನಿಸಬೇಕು. ಬಂದ ಇರುವ ಈ ೨೬ ಬೊರವೆಲ್‌ಗಳು ವಿವಿಧ ಎಕ್ಸಟೆನ್‌ಶೆನ್ ಪ್ರದೇಶಗಳಲ್ಲಿರುವುದರಿಂದ ದುರಸ್ತಿಗೆ ಕ್ರಮ ವಹಿಸಿದ್ದಲ್ಲಿ ವಿವಿಧ ವಾರ್ಡಗಳಿಗೆ ಹೆಚ್ಚುವರಿ ನೀರು ಒದಗಿಸಲು ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಯಾವುದೇ ಅನಾಹುತಕ್ಕೆ ಅವಕಾಶ ನೀಡದೆ ಸುಸ್ಥಿತಿಯಲ್ಲಿರದ ಬೊರವೆಲ್‌ಗಳನ್ನು ಮುಚ್ಚಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಸಮಸ್ಯೆ ಇರುವ ಸ್ಥಳಗಳಿಗೆ ಮಹಾನಗರ ಪಾಲಿಕೆ ಹಾಗೂ ಜಲಮಂಡಳಿ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮಸ್ಯೆ ಪರಿಹಾರಕ್ಕಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ಜನವರಿಗೆ ತಿಳಿ ಹೇಳಿ, ಮನವರಿಕೆ ಮಾಡಬೇಕು ಇದರಿಂದ ಜನರಲ್ಲಿಯೂ ಸಹ ಅಧಿಕಾರಿಗಳ ಮೇಲೆ ವಿಶ್ವಾಸ ಮೂಡುವುದರಿಂದ ಅಧಿಕಾರಿಗಳು ಕುಡಿಯುವ ನೀರಿನ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮೂಲಕ ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ನಗರದಲ್ಲಿರುವ ೩೩ ತೆರೆದ ಬಾವಿಗಳಲ್ಲಿ ೭ ತೆರೆದ ಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾಗಿರುವುದರಿಂದ ಮೋಟರ್ ಅಳವಡಿಸಲು ಸಾಧ್ಯವಾಗಿಲ್ಲ. ರಿ-ಡ್ರೀಲ್ಲಿಂಗ್ ಮಾಡುವ ಮೂಲಕ ಸುಸ್ಥಿತಿಯಲ್ಲಿಡಲು ಪ್ರಯತ್ನಿಸಬೇಕು. ಅದ್ಯಾಗೂ ನೀರಿನ ಇಳುವರಿ ಬರದೇ ಇದ್ದ ಸಂದರ್ಭದಲ್ಲಿ ತೆರೆದೆ ಕೊಳವೆ ಬಾವಿಗಳನ್ನು ಮುಚ್ಚಲು ಕ್ರಮ ವಹಿಸಬೇಕು. ಕೌಜಲಗಿ ತಾಂಡಾ ಹೊರತುಪಡಿಸಿ ಉಳಿದೆಡೆ ಸಮರ್ಪಕವಾಗಿ ನೀರು ಪೂರೈಸಲಾಗುತ್ತಿದ್ದು, ಭೂತನಾಳ ತಾಂಡಾದಲ್ಲಿನ ಪೈಪಲೈನ್ ಕಾಮಗಾರಿಗೆ ವಿಪತ್ತು ನಿಧಿಯಡಿ ೨ಲಕ್ಷ ರೂ.ವರೆಗಿನ ದುರಸ್ತಿ ಕಾಮಗಾರಿ ಅನುದಾನ ಒದಗಿಸಲು ಅವಕಾಶವಿರುವುದರಿಂದ ಭೂತನಾಳ ತಾಂಡಾದಲ್ಲಿ ಪೈಪಲೈನ್ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ ಅವರು, ಸಾರ್ವಜನಿಕರು ಸಹ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಿ, ಅನಗತ್ಯವಾಗಿ ನೀರನ್ನು ಎಲ್ಲೆಂದರಲ್ಲಿ ಹರಿಬಿಡದೇ ಅಗತ್ಯವಿರುವ ನೀರನ್ನು ಬಳಕೆ ಮಾಡಿಕೊಳ್ಳುವಂತೆ ಮನವರಿಕೆ ಮಾಡಬೇಕು. ಲಭ್ಯವಿರುವ ನೀರಿನ ಸದ್ಭಳಕೆ ಮಾಡಿಕೊಂಡು ಸಮರ್ಪಕವಾಗಿ ನಿರ್ವಹಣೆ ಮಾಡಿ ಎಲ್ಲ ವಾರ್ಡಗಳಿಗೆ ಕನಿಷ್ಠ ೩ ರಿಂದ ೪ ದಿನಗಳಿಗೊಮ್ಮೆ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅರ್ಶದ ಶರೀಫ್, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಪ್ರೀತಮ ನಸ್ಲಾಪುರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.