ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ
ವಿಜಯಪುರ: ಲೋಕಸಭಾ ಚುನಾವಣೆಗಾಗಿ ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚದ ಮೇಲೆ ತೀವ್ರ ನಿಗಾ ಇಡುವ ಕಾರ್ಯವಾಗಬೇಕು ಎಂದು ವಿಜಯಪುರ ಲೋಕಸಭಾ ಚುನಾವಣಾ ವೆಚ್ಚ ವೀಕ್ಷಕರಾಗಿರುವ ಐ ಆರ್ ಎಸ್ ಅಧಿಕಾರಿ ಅನುಪಕುಮಾರ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರದಂದು ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಚುನಾವಣೆಯಾದರು ಕೂಡ ನಿರ್ಲಕ್ಷಿಸುವಂತಿಲ್ಲ, ವಿದಾನ ಸಭೆ ಚುನಾವಣೆಯಂತೆ ಲೋಕಸಭಾ ಚುನಾವಣೆಯನ್ನು ಕೂಡಾ ಅಷ್ಟೇ ಗಂಬೀರವಾಗಿ ಪರಿಗಣಿಸಿ ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕು. ಬ್ಯಾಂಕುಗಳಲ್ಲಿ ಹೊಸ ಖಾತೆಗಳನ್ನು ತೆರೆಯಲಾಗುತ್ತಿದೆಯಾ ಎಂದು ಪರಿಶೀಲಿಸಿ ಮತ್ತು ಆ ಖಾತೆಗಳಿಗೆ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ವರ್ಗಾವಣೆಯಾಗುತ್ತಿದೆಯಾ ಎಂಬುದನ್ನು ವಿಚಾರಿಸಿ ಖಚಿತಪಡಿಸಿಕೊಳ್ಳಬೇಕು, ಚೆಕ್ ಪೋಸ್ಟಗಳಲ್ಲಿ ಕಾಟಾಚಾರಕ್ಕೆ ಮಾಡಿದಂತೆ ತಪಾಸಣೆಯಾಗಬಾರದು, ಕಟ್ಟು ನಿಟ್ಟಾಗಿ ಪರಿಶೀಲಿಸುವದರೊಂದಿಗೆ ಸಾರ್ವಜನಿಕರಿಗೆ ತೊಂದೆಯಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.
ಮದ್ಯದಂಗಡಿಗಳಲ್ಲಿ ನಿಗದಿಪಡಿಸಿದಕಿಂತ ಹೆಚ್ಚಿನ ಮಟ್ಟದ ಸಾರಾಯಿ ಮಾರಾಟವಾದಲ್ಲಿ ತಕ್ಷಣ ಗಮನಕ್ಕೆ ತರಬೇಕು, ಮಹಾರಾಷ್ಟç ರಾಜ್ಯಕ್ಕೆ ಗಡಿಬಾಗ ಜಿಲ್ಲೆಯಾಗಿರುವುದರಿಂದ ಅಬಕಾರಿ ಇಲಾಖಾ ಅಧಿಕಾರಿ ಕಟ್ಟು ನಿಟ್ಟಾಗಿ ಕೆಲಸ ನಿರ್ವಹಿಸಿ ಅಲ್ಲದೇ ಪ್ರಿಂಟಿಂಗ್ ಪ್ರೆಸ್‌ಗಳ ಮೇಲೆ ಕೂಡಾ ನಿಗಾ ಇಡುವುದು ಅವಶ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂ ಬಾಲನ್ ಮಾತನಾಡಿ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ. ಜನೇವರಿ ೨೨ ರಂದು ಹೊರಡಿಸಲಾದ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು ೧೯,೧೯,೦೪೮ ಮತದಾರರಿದ್ದು, ಈ ಪೈಕಿ ೯,೭೬,೦೭೩ ಪುರುಷ, ೯,೪೨,೭೫೭ ಮಹಿಳಾ ಹಾಗೂ ೨೧೮ ತೃತೀಯ ಲಿಂಗ ಮತದಾರಿರುತ್ತಾರೆ, ಗ್ರಾಮೀಣ ಭಾಗದಲ್ಲಿ ೧೫೦೭ ಹಾಗೂ ಪಟ್ಟಣ ಪ್ರದೇಶದಲ್ಲಿ ೫೭೮ ಸೇರಿ ಒಟ್ಟು ೨೦೮೫ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುಗಮ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ಜರುಗಿಸುವ ದೃಷ್ಟಿಯಿಂದ ಒಟ್ಟು ೧೬೭ ಸೆಕ್ಟರ್ ಅಧಿಕಾರಿ, ೭೨ ಫ್ಲಾಯಿಂಗ್ ಸ್ವಾö್ಯಡ್, ೮೭ ಸ್ಟೆಟಿಕ್ ಸರ್ವಲೈನಸ್ ತಂಡ, ೨೪ ವಿಡಿಯೋ ಸರ್ವಲೈನಸ್ ಹಾಗೂ ೮ ವಿಡಿಯೋ ವಿವ್ಹಿಂಗ್ ತಂಡ ರಚಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತನಾಡಿ ಜಿಲ್ಲೆಯಲ್ಲಿ ಒಟ್ಟು ೨೯ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಅವುಗಳಲ್ಲಿ ೧೨ ಅಂತರಾಜ್ಯ ಹಾಗೂ ೧೭ ಅಂತರಾಜ್ಯ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ಇತರರು ಇದ್ದರು.

