ವಿಜಯಪುರ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಶನಿವಾರ ಸರಳವಾಗಿ ದೇವರದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸರಳ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಶೀಲ್ದಾರರಾದ ಕವಿತಾ ಅವರು ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಮಾಜದ ಬಿ.ಎಂ.ನೂಲವಿ, ಎ.ಬಿ.ಕೋಷ್ಠಿ, ಎ.ಬಿ.ಅಂಕದ, ಆನಂದ ಹುಲಮನಿ, ಜವಳಗಿ ಎಂ.ಸಿ., ನಾಗಪ್ಪ ಭಾವಿಕಟ್ಟಿ, ಸಂತೋಷ ಬಂಡೆ, ಪಿ.ಎಂ.ಬಲ್ಲಾಳ, ಶ್ರೀಮತಿ ವಿದ್ಯಾವತಿ ಅಂಕಲಗಿ, ಬಸವರಾಜ ಒಂಟಗೋಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

