Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣತತ್ವ ಅಳವಡಿಸಿಕೊಂಡರೆ ಜಗತ್ತು ಸಮೃದ್ಧಿ :ಮಹಾಂತ ಶ್ರೀ
(ರಾಜ್ಯ ) ಜಿಲ್ಲೆ

ಶರಣತತ್ವ ಅಳವಡಿಸಿಕೊಂಡರೆ ಜಗತ್ತು ಸಮೃದ್ಧಿ :ಮಹಾಂತ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಜಗತ್ತಿನ ಯಾವ ಧರ್ಮಪರಂಪರೆಯಲ್ಲಿ ಸಿಗದೇ ಇರುವ ಅಮೂಲ್ಯ ತತ್ವಗಳಾದ ಕಾಯಕ-ದಾಸೋಹ-ಇಷ್ಟಲಿಂಗ ಪೂಜೆ ಶರಣಧರ್ಮದಲ್ಲಿದೆ. ಶರಣಧರ್ಮ ಪರಂಪರೆ ನೀಡಿರುವ ಮೌಲ್ಯಗಳನ್ನು ಜಗತ್ತು ಅಳವಡಿಸಿಕೊಂಡರೆ ಪ್ರಗತಿಯಾಗಲು ಸಾಧ್ಯ ಎಂದು ಮುದಗಲ್ದ ಕಲ್ಯಾಣ ಆಶ್ರಮ, ಮಹಾಂತೇಶ್ವರಮಠದ ಮಹಾಂತ ಸ್ವಾಮೀಜಿ ಹೇಳಿದರು.
ತಾಲೂಕಿನ ಯರನಾಳ ವಿರಕ್ತಮಠದಲ್ಲಿ ಶುಕ್ರವಾರ ಸಂಜೆ ಕರ್ತೃ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಮನುಷ್ಯನಿಗೆ ಅನೇಕ ದಾಹಗಳಿವೆ. ಶರಣರು ಈ ದಾಹಕ್ಕೆ ಸೋ ಎಂಬ ಶಬ್ಧ ಸೇರಿಸಿ ವಿಶಾಲವಾದ ದಾಸೋಹದ ಕಲ್ಪನೆ ನೀಡಿದ್ದಾರೆ. ದಾಸೋಹವೆಂದರೆ ಕೇವಲ ಶ್ರೀಮಠಗಳಿಗೆ ಸೀಮಿತವಲ್ಲ. ಇಡೀ ವಿಶ್ವವನ್ನು ಗಮನದಲ್ಲಿಕೊಂಡು ವಿಶಾಲಾರ್ಥದಲ್ಲಿ ಶರಣರು ದಾಸೋಹದ ಪರಿಕಲ್ಪನೆ ನೀಡಿದ್ದಾರೆ. ಈ ತತ್ವವನ್ನು ಅಳವಡಿಸಿಕೊಂಡರೆ ಇಡೀ ಜಗತ್ತು ಸಮೃದ್ಧಿಯಾಗುತ್ತದೆ. ಬಸವಾದಿ ಶರಣರ ತತ್ವಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳದೇ ಹೋದರೆ ಜಗತ್ತು ಅಭಿವೃದ್ಧಿಯಾಗುವದಿಲ್ಲ. ಇಂದು ಎಲ್ಲರೂ ತಮ್ಮ ಸ್ವಾರ್ಥ ಜೀವನದಿಂದಾಗಿ ಮನುಷ್ಯತ್ವ ಕಳೆದುಕೊಳ್ಳುತ್ತಿರುವುದು ವಿಷಾದಕರ ಸಂಗತಿ. ಎಲ್ಲರೂ ಶರಣ ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಸಮಾಜ ನಿರ್ಮಾಣವಾಗಿ ಎಲ್ಲರೂ ಶಾಂತಿ,ನೆಮ್ಮದಿಯಿಂದ ಇರಲು ಸಾಧ್ಯ ಎಂದರು.
ಜಗತ್ತಿನಲ್ಲಿ ಲೌಕಿಕವಾಗಿ ಅನೇಕರು ತಮ್ಮ ಜನ್ಮದಿನಾಚರಣೆಯನ್ನು ಕೇಕ್ ಕತ್ತರಿಸಿ ಆಚರಿಸುವುದನ್ನು ನೋಡುತ್ತೇವೆ. ಈ ಶ್ರೀಮಠದ ಶ್ರೀಗಳು ತಮ್ಮ ಜನ್ಮದಿನಾಚರಣೆಯಲ್ಲಿ ವೈಶಿಷ್ಟ್ಯಪೂರ್ವ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಜೊತೆಗೆ ಪ್ರತಿಭಾವಂತರಿಗೆ ಪುರಸ್ಕಾರ ನೀಡುತ್ತಿರುವುದು ಇತರರಿಗೆ ಆದರ್ಶಪ್ರಾಯ.ಬಂಥನಾಳದ ಸಂಗನಬಸವ ಸ್ವಾಮೀಜಿಯವರ ಪ್ರವಚನದ ಹಾದಿಯಲ್ಲಿ ನಾವು ಪ್ರವಚನಗೈಯುತ್ತಿರುವ ಸೇವೆಯನ್ನು ಗುರುತಿಸಿ ನಮಗೆ ಸುವರ್ಣ ಪ್ರಶಸ್ತಿಯನ್ನು ಪ್ರದಾನ ಮಾಡಿರುವದು ಸಂತಸ ತಂದಿದೆ. ಇಂದು ಪ್ರಶಸ್ತಿಗಳು ನಿಜವಾದ ಪ್ರತಿಭಾವಂತರಿಗೆ ಸಿಗದೇ ಮಾರಾಟವಾಗುತ್ತಿರುವುದು ಕಾಣುತ್ತಿದ್ದೇವೆ ಎಂದರು.
ಸುವರ್ಣ ಪ್ರಶಸ್ತಿ ಸ್ವೀಕರಿಸಿದ ಚಿಂತಕ,ವಿಮರ್ಶಕ ಪ್ರೊ.ಎಸ್.ಜಿ,ಸಿದ್ದರಾಮಯ್ಯ ಮಾತನಾಡಿ, ಕನ್ನಡ ನೆಲದಲ್ಲಿ ಹುಟ್ಟಿದ ಕನ್ನಡದ ವಚನಧರ್ಮ ಲಿಂಗಾಯತ ಧರ್ಮ. ಇದು ಕಾಯಕ ಜೀವಿಗಳು ಸಂಘಟಿತರಾಗಿ ಕನ್ನಡ ಧರ್ಮ. ಇದರ ನೇತೃತ್ವವನ್ನು ವಹಿಸಿಕೊಂಡಿದ್ದ ಮಹಾ ಮಾನವತಾಜೀವಿ ಬಸವಣ್ಣನವರು. ಇವರು ಕನ್ನಡ ನೆಲದ ಕನ್ನಡ ಭಾಷೆಯ ಸಾಂಸ್ಕ್ರತಿಕ ವಕ್ತಾರರಾಗಿದ್ದಾರೆ. ಕಾಯಕದ ಬೆವರಿನ ಬೆಲೆಯನ್ನು ಸತ್ಯಶುದ್ಧ ಘನತೆಯಲ್ಲಿ ಎತ್ತಿಹಿಡಿದಂತೆ ಕಾಯಕವೇ ಕೈಲಾಸವೆಂದು ಕರೆದದ್ದು ವಚನಧರ್ಮ ಎಂದರು.

ಇಂಗಳೇಶ್ವರದ ಡಾ.ಸಿದ್ದಲಿಂಗ ಸ್ವಾಮೀಜಿ, ಮುತ್ತಗಿಯ ವೀರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಸುವರ್ಣ ಪ್ರಶಸ್ತಿ ಸ್ವೀಕರಿಸಿದ ಶಂಕರಯ್ಯ ಘಂಟಿ, ಸಾಹಿತಿ ಡಾ.ಸಿ.ಸಿ.ಲಿಂಗಣ್ಣ ಮಾತನಾಡಿದರು.
ಸಾನಿಧ್ಯವನ್ನು ಶ್ರೀಮಠದ ಗುರುಸಂಗನಬಸವ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ಶಿವಪ್ರಸಾದ ದೇವರು ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಗನಗೌಡ ಬಿಕಾದಾರ, ರವಿ ಪಟ್ಟಣಶೆಟ್ಟಿ, ಅಮರಪ್ಪಗೌಡ ಪಾಟೀಲ, ಬಸವರಾಜ ಬಿರಾದಾರ ದಂಪತಿಗಳನ್ನು ಆದರ್ಶ ದಂಪತಿಗಳೆಂದು ಗೌರವಿಸಲಾಯಿತು. ಶ್ರೀಗಳ ಜನ್ಮಸುವರ್ಣ ಮಹೋತ್ಸವದಂಗವಾಗಿ ವಿದ್ಯಾರ್ಥಿದೇವೋಭವದಂಗವಾಗಿ ಬಡವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ವಿತರಿಸಲಾಯಿತು. ಸಾಕ್ಷಿ ಹಿರೇಮಠ ಪ್ರಾರ್ಥಿಸಿದರು. ಶಂಕರಗೌಡ ಪಾಟೀಲ ಸ್ವಾಗತಿಸಿದರು. ಗಿರಿಜಾ ಪಾಟೀಲ, ಪುಷ್ಪಾ ಗುಳೇದ, ಶರಣಬಸು ಹಳಮನಿ ನಿರೂಪಿಸಿದರು. ಅಂತರಾಷ್ಟ್ರೀಯ ಕಲಾವಿದರಾದ ದೀಶಾ ಬಿಸೆ, ದಿವ್ಯಾ ಬಿಸೆ ಹಾಗೂ ಸಂಗಡಿಗರಿಂದ ವಚನ ನೃತ್ಯ, ಹಾಸ್ಯ ನಟ ಪ್ರವೀಣ ಗಸ್ತಿ ಅವರಿಂದ ಹಾಸ್ಯ ಕಾರ್ಯಕ್ರಮ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.