ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತದಿಂದ ಶನಿವಾರ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ದೇವರ ದಾಸಿಮಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಬಸವಣ್ಣನವರ ಕಾಲದ ಪೂರ್ವದಲ್ಲಿ ೧೧ ನೇ ಶತಮಾನದಲ್ಲಿಯೇ ವಚನಗಳನ್ನು ರಚಿಸುವ ಮೂಲಕ ಸಮಾಜದ ಓರೆ-ಕೋರೆಗಳನ್ನು ತಿದ್ದಿದ ಕೀರ್ತಿ ಆದ್ಯ ವಚನಕಾರ ದೇವರ ದಾಸಿಮಯ್ಯನವರಿಗೆ ಸಲ್ಲುತದೆ. ಅಂತಹ ಶರಣರ ವಚನಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನ ಸುಂದರ ಮಾಡಿಕೊಳ್ಳಬೇಕೆಂದರು.
ನಿವೃತ್ತ ಶಿಕ್ಷಕ ಎಸ್.ಕೆ.ಸೋಮನಕಟ್ಟಿ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ಡಾ.ಶ್ರೀಶೈಲ ಕೂಡಗಿ, ನಿವೃತ್ತ ಉಪನ್ಯಾಸಕ ಕೆ.ಬಿ.ಕಡೆಮನಿ ಅವರು ದೇವರ ದಾಸಿಮಯ್ಯನವರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಶಿವಪುತ್ರ ಅಂಕದ, ಎಸ್.ಬಿ.ಚವ್ಹಾಣ, ಬಸವರಾಜ ನಾಯ್ಕೋಡಿ, ವಿಲಾಸ ಜಾಡರ, ಬಸವರಾಜ ಪಟ್ಟಣದ, ಸೋಮು ಗೋಟೆದ, ಐ.ಜಿ.ಬೆಕಿನಾಳ ಇತರರು ಇದ್ದರು. ಜಿಲ್ಲಾ ಕುರುಹಿನ ಶೆಟ್ಟಿ ಸಮಾಜ ನಿರ್ದೇಶಕ ಶ್ರೀಶೈಲ ಶಿರಗುಪ್ಪಿ ನಿರೂಪಿಸಿ, ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

