ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ. ಅವರು ಶುಕ್ರವಾರ ಸಂಜೆ ಬೆಳೆ ಸಮೀಕ್ಷೆಗಾರರಿಗೆ ಟೀ ಶರ್ಟ್, ಕ್ಯಾಪ್ ವಿತರಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಮಾತನಾಡಿ, ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮಾಡುವ ಸಮೀಕ್ಷೆಗಾರರಿಗೆ ಕೃಷಿ ಇಲಾಖೆಯಿಂದ ಟೀ ಶರ್ಟ್, ಕ್ಯಾಪ್ ವಿತರಣೆ ಮಾಡಲಾಗುತ್ತಿದೆ. ಬೆಳೆ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆಗಾರರನ್ನು ಗುರುತಿಸಲು ಇದು ನೆರವಾಗುತ್ತದೆ. ಎಲ್ಲ ಬೆಳೆ ಸಮೀಕ್ಷೆಗಾರರು ಸರಿಯಾಗಿ ಜಿಪಿಎಸ್ ಮಾಡುವ ಮೂಲಕ ಬೆಳೆ ಸಮೀಕ್ಷೆ ಕಾರ್ಯ ಮಾಡಬೇಕೆಂದರು.
ಈ ಸಂದರ್ಭದಲ್ಲಿ ಬಸವನಬಾಗೇವಾಡಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಕೊಲ್ಹಾರ ತಹಸೀಲ್ದಾರ ಎಸ್.ಎಸ್.ನಾಯಕಲಮಠ, ಕೃಷಿ ಇಲಾಖೆಯ ಚಿದಾನಂದ ಹಿರೇಮಠ, ಬಿ.ಎಸ್.ಸಕ್ರಿ, ಜಿ.ಬಿ.ಮೇದಕಿನಾಳ, ಆತ್ಮ ಸಿಬ್ಬಂದಿ, ಕಂದಾಯ ಇಲಾಖೆಯ ಸಿಬ್ಬಂದಿ, ಕಂದಾಯ ನಿರೀಕ್ಷಕರು, ಗ್ರಾಮಾಡಳಿತಾಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

