Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೬ರಿಂದ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಏ.೧೬ರಿಂದ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ತಾಲೂಕಿನ ಕಲಗುರ್ಕಿ ಗ್ರಾಮದ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಹಾಗೂ ದೇವಸ್ಥಾನದ ೧೦ನೇ ವಾರ್ಷಿಕೋತ್ಸವ ಏ.೧೬ರಿಂದ ೨೬ರ ವರೆಗೆ ವಿವಿಧ ಧಾರ್ಮಿಕ, ಮನೋರಂಜನಾ, ಹಾಸ್ಯ ವಿಡಂಬನೆ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಕಾರ್ಯಕ್ರಮಗಳು ನಡೆಯುವವು ಎಂದು ಮಲ್ಲಿಕಾರ್ಜುನ ದೇವಸ್ಥಾನದ ದಶಮಾನೋತ್ಸವ ಸೇವಾ ಸಮೀತಿಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮಸೂತಿ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ನಡೆಯುವವು. ದಿನಾಂಕ ೧೬ ಮಂಗಳವಾರ ಸಾಯಂಕಾಲ ೭ ಘಂಟೆಗೆ ಪುರಾಣ ಕಾರ್ಯಕ್ರಮದ ಪ್ರಾರಂಭೋತ್ಸವ ಹರ ಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ನಡೆಯುವದು. ಕಲಬುರ್ಗಿ ಜಿಲ್ಲೆ ಚಿಂಚೊಳ್ಳಿ ತಾಲೂಕಿನ ಐನಾಪೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಪಂಚಾಕ್ಷರಿ ದೇವರ ಅಮ್ರತವಾಣಿಯಿಂದ ಕಲಬುರ್ಗಿ ಶರಣಬಸವೇಶ್ವರ ಪುರಾಣ ಪಠಣ ನಡೆಯುವದು. ಬಸಲಿಂಗಯ್ಯ ಗವಾಯಿಗಳು ಹಾಗೂ ಸುಭಾಸ ಸಂಗೀತಸೇವೆ ಒದಗಿಸುವರು.
ದಿನಾಂಕ ೨೫ ಗುರುವಾರ ಮುಂಜಾನೆ ೯ ಘಂಟೆಗೆ ಮುತ್ತೆöÊದೆಯರಿಗೆ ಉಡಿತುಂಬುವ ಕಾರ್ಯಕ್ರಮ ೧೦.೩೦ ಘಂಟೆಗೆ ಧರ್ಮಸಭೆ, ಸಾಯಂಕಾಲ ೬ ಘಂಟೆಗೆ ದೇಶ ಸೇವೇಗೈದ ನೀವೃತ್ತ ಸೈನಿಕರಿಗೆ ಪ್ರಗತಿಪರ ರೈತರಿಗೆ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮ ಈ ಕಾರ್ಯಕ್ರಮದ ಸಾನಿಧ್ಯವನ್ನು ಹಾನಗಲ್, ಉಪ್ಪಿನಬೆಟಗೇರಿ, ಕಲಗುರ್ಕಿ, ಜೇವರ್ಗಿ, ಗುಳೇದಗುಡ್ಡ ಮತ್ತು ಮಲಘಾನ ಶ್ರೀಗಳು ವಹಿಸುವರು. ರಾಜಕೀಯ ಗಣ್ಯಮಾನ್ಯರು, ಮುಖಂಡರು ಅತಿಥಿಗಳಾಗಿ ಆಗಮಿಸುವರು.
ದಿನಾಂಕ ೨೬ ಶುಕ್ರವಾರ ಬೆಳಿಗ್ಗೆ ೫ ಘಂಟೆಗೆ ವೇದಮೂರ್ತಿ ಈರಯ್ಯ ಹಿರೇಮಠ ಇವರಿಂದ ಮಹಾರುದ್ರಾಭಿಷೇಕ ೮ ಘಂಟೆಗೆ ಸಂಗಮೇಶ್ವರ ದೇವಸ್ಥಾನದಿಂದ ಕಳಸ ಕುಂಭ, ಆರತಿ, ಸಕಲ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಮಲ್ಲಿಕಾರ್ಜುನ ದೇವರ ಭಾವಚಿತ್ರದ ಭವ್ಯ ಮೆರವಣಿಗೆಯು ಜರುಗುವದು. ನಂತರ ಕಳಸಾರೋಹಣ ನಡೆಯುವದು. ೧೦ ಘಂಟೆಗೆ ದೂರದರ್ಶನ ಕಲಾವಿದರಾದ ಗೋಪಾಲ ಇಂಚಗೇರಿ, ಶಿವು ಮುರಗೋಡ ಇವರಿಂದ ಹಾಸ್ಯದ ಹೊನಲು ಕಾರ್ಯಕ್ರಮ ಇರುವದು. ಕಾರ್ಯಕ್ರಮದಲ್ಲಿ ಜಾನಪದ ಕಲಾವಿದ ಸಿದ್ದಪ್ಪ ಬಿದರಿ ಅವರಿಂದ ಆಧುನಿಕ ಶೈಲಿಯ ಕವಿವಾಚನ ಜರಗುವುದು. ಶ್ರೀಗಳು ಗಣ್ಯರು ಉಪಸ್ಥಿತರಿರುವರು.
ರಾತ್ರಿ ೧೦ ಘಂಟೆಗೆ ಮಲ್ಲಿಕಾರ್ಜುನ ನಾಟ್ಯ ಸಂಘ ಕಲಗುರ್ಕಿ ಇವರಿಂದ ಮಗಾ ಹೋದರು ಮಾಂಗಲ್ಯ ಬೇಕು ಎಂಬ ಸಾಮಾಜಿಕ ನಾಟಕ ಇರುವದು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಜಗದ ಧರ್ಮ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕಪ್ ಗೆದ್ದ ಬಿಎಲ್ಡಿಇ ಸಂಸ್ಥೆಯ ಆಯುರ್ವೇದ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.