Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರಕ್ಕೆ ಮುಹೂರ್ತ
(ರಾಜ್ಯ ) ಜಿಲ್ಲೆ

ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರಕ್ಕೆ ಮುಹೂರ್ತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕ್ಲಾಪ್ ಮಾಡಿ ಶುಭ ಹಾರೈಸಿದ ಹಿರಿಯ ನಿರ್ದೇಶಕ ಗಿರೀಶ ಕಾಸರವಳ್ಳಿ

ಬೆಂಗಳೂರು: ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಮುಹೂರ್ತ ಸಮಾರಂಭ ಏ.13 ಶನಿವಾರ ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಶ್ರೀಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು.
ಇಂಚಗೇರಿಯ ಶ್ರೀ ಪ್ರಭುಜೀ ಮಹಾರಾಜರ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.
ಇಂಚಗೇರಿಯ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆಯನ್ನು ಚಿತ್ರ‌ ಮಾಡಿ ಎಂದು ನಾನು ಎರಡು ವರ್ಷಗಳ ಹಿಂದೆ ನಿರ್ಮಾಪಕ ಮಾಧವಾನಂದ ಅವರಿಗೆ ತಿಳಿಸಿದೆ. ಅದು ಈಗ ಕಾರ್ಯರೂಪಕ್ಕೆ ಬಂದಿದೆ. ರಾಜ್ಯದೆಲ್ಲೆಡೆ ಇಂಚಗೇರಿ ಸಂಪ್ರದಾಯಕ್ಕೆ ಅದರದೆ ಆದ ಮಹತ್ವವಿದೆ‌. ಅದನ್ನು ಶ್ರೀಸಂಗಮೇಶ್ವರ ಮಹಾರಾಜರು ಪಾಲಿಸಿಕೊಂಡು ಬರುತ್ತಿದ್ದರು. ಕಲಿಯುಗದ ಕಲ್ಪತರುವೆಂದೆ ಖ್ಯಾತರಾಗಿರುವ ಶ್ರೀಸಂಗಮೇಶ್ವರರ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಶ್ರೀಪ್ರಭುಜೀ ಮಹಾರಾಜರು ಆಶೀರ್ವದಿಸಿದರು.
ನಾನು ಈ ಚಿತ್ರದ ಮುಹೂರ್ತಕ್ಕೆ ಬರಲು ನಿರ್ಮಾಪಕ ಹಾಗೂ ನಿರ್ದೇಶಕರು ಇಬ್ಬರು ಕಾರಣ. ಏಕೆಂದರೆ, ಅವರಿಬ್ಬರು ನನ್ನ “ತಾಯಿಸಾಹೇಬ” ಚಿತ್ರದ ಸಮಯದಲ್ಲಿ ಸಹಾಯ ಮಾಡಿದ್ದಾರೆ. ಇನ್ನು ಶ್ರೀಸಂಗಮೇಶ್ವರ ಮಹಾರಾಜರ ಚರಿತ್ರೆ ಕೇಳಿದಾಗ ಆಶ್ಚರ್ಯವಾಯಿತು. ನೀವು ತೆರೆಯಮೇಲೆ ಅವರನ್ನು ಪವಾಡ ಪುರುಷರಂತೆ ತೋರಿಸದೆ, ಮಹಾನ್ ಸಾಧಕರ ರೀತಿ ತೋರಿಸಿ ಎಂದು ಸಲಹೆ ನೀಡಿದ ನಿರ್ದೇಶಕ ಗಿರೀಶ್ ಕಾಸರವಳ್ಳಿ ಚಿತ್ರಕ್ಕೆ ಹಾಗೂ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.
ಶ್ರೀಪ್ರಭುಜೀ ಮಹಾರಾಜರು ಹೇಳಿದಂತೆ ಇಂದು ಶ್ರೀ ಸಂಗಮೇಶ್ವರ ಮಹಾರಾಜರ ಕುರಿತಾದ ಚಿತ್ರಕ್ಕೆ ಚಾಲನೆ ದೊರಕಿದೆ. ಚಾಲನೆ ನೀಡಿದ ಪ್ರಭು ಮಹಾರಾಜರಿಗೆ ಹಾಗೂ ಗಿರೀಶ್ ಕಾಸರವಳ್ಳಿ ಅವರಿಗೆ ಧನ್ಯವಾದ. ಮುಂದಿನ ತಿಂಗಳಿನಿಂದ ನಾಲ್ಕು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ನೂತನ ಪ್ರತಿಭೆ ರವಿ ನಾರಾಯಣ್ ಶ್ರೀಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ವಿಶ್ವಪ್ರಕಾಶ ಟಿ ಮಲಗೊಂಡ, ನಾರಾಯಣ ಸ್ವಾಮಿ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದು ನಿರ್ದೇಶಕ ರಾಜಾ ರವಿಶಂಕರ್ ತಿಳಿಸಿದರು.
ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. ಇದು ಮೂರನೇಯ ಚಿತ್ರ. ಶ್ರೀಸಂಗಮೇಶ್ವರ ಮಹಾರಾಜರ ಸಾಧನೆಗಳು ಅಪಾರ. ಆ ಸಾಧನೆಗಳನ್ನು ಚಿತ್ರದ ಮೂಲಕ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಮಾಧವಾನಂದ ಯೋಗಪ್ಪ ಶೇಗುಣಸಿ ತಿಳಿಸಿದರು.
ತಮ್ಮ ಪಾತ್ರದ ಬಗ್ಗೆ ರವಿ ನಾರಾಯಣ್ ವಿವರಣೆ ನೀಡಿದರು. ಸಂಗೀತ ನಿರ್ದೇಶಕ ಎ.ಟಿ.ರವೀಶ್ ಸೇರಿದಂತೆ ಚಿತ್ರತಂಡದ ಸದಸ್ಯರು ಹಾಗು ಇಂಚಗೇರಿ ಸಂಪ್ರದಾಯದ ಭಕ್ತರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ

ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ

ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ

ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಜಗದ ಧರ್ಮ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲ್ಯೂಜೆ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕಪ್ ಗೆದ್ದ ಬಿಎಲ್ಡಿಇ ಸಂಸ್ಥೆಯ ಆಯುರ್ವೇದ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.