ತಿಕೋಟಾ: ತಾಲ್ಲೂಕಿನ ಕನಮಡಿ ಗ್ರಾಮದ ಮಲ್ಲಪ್ಪ ಆರ್. ತುಂಗಳ ಅವರು ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ದೇವರಹಿಪ್ಪರಗಿಯಲ್ಲಿ ಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ನಡೆದ ತೃತೀಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಹಕಾರಿ ಕ್ಷೇತ್ರ ಸೇರಿದಂತೆ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೂ ಕೊಡುಗೆಯನ್ನು ನೀಡುತ್ತಾ ಗ್ರಾಮದ ಕೀರ್ತಿಯನ್ನು ಎಲ್ಲಡಡೆ ಹರಡುವಂತೆ ಮಾಡಿದ ಇವರಿಗೆ ಪ್ರಶಸ್ತಿ ಲಭಿಸಿರುವದು ಗ್ರಾಮಸ್ಥರಿಗೆ ಖುಷಿ ತಂದಿದೆ.
ಈ ಸಂದರ್ಭದಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಜಡೆಸಿದ್ದೇಶ್ವರ ಶಿವಾಚಾರ್ಯ, ವೀರಗಂಗಾಧರ ಶಿವಾಚಾರ್ಯ ಹಾಗೂ ಅತಿಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

