ಸಿಂದಗಿ: ದೇವರ ದಾಸಿಮಯ್ಯ ಅವರಂತಹ ವಚನಕಾರರು ಸಮಾಜವನ್ನು ಬಹಳ ಆಳವಾಗಿ ಅಧ್ಯಯನ ಮಾಡಿ, ಅದರ ಓರೆಕೋರೆಗಳನ್ನು ಸೂಕ್ಷ್ಮವಾಗಿ ಗ್ರಹಿಸಿ, ಅವುಗಳನ್ನು ತಮ್ಮ ವಚನಗಳ ಮೂಲಕ ತಿದ್ದಿದವರು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಹಮ್ಮಿಕೊಂಡ ದೇವರ ದಾಸಿಮಯ್ಯ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಸಲ್ಲಿಸಿ ಮಾತನಾಡಿದ ಅವರು, ಇಡೀ ಮಾನವ ಸಮಾಜಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ತೋರಿಸಿದ ಆದ್ಯ ವಚನಕಾರ ದೇವರ ದಾಸಿಮಯ್ಯ ಎಲ್ಲ ಸಮುದಾಯಗಳಿಗೆ ಮಾದರಿಯಾಗಿದ್ದಾರೆ. ವಚನಗಳನ್ನು ಆಲಿಸುವುದರಿಂದ ಬದುಕಿನಲ್ಲಿ ಸ್ಫೂರ್ತಿ ಹೆಚ್ಚುತ್ತದೆ. ಸರಿಯಾದ ದಾರಿಯಲ್ಲಿ ನಡೆಯುವ ಮೂಲಕ ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಶ್ಯಾಮಲಾ ಮಂದೇವಾಲ್ ಮಾತನಾಡಿದರು.
ಇದೇ ಸಂದರ್ಭದಲ್ಲಿ ಗ್ರೇಡ್ ೨ ತಹಶೀಲ್ದಾರ್ ಇಂದ್ರಾಬಾಯಿ ಬಳಗಾನೂರ, ಕಂದಾಯ ನಿರೀಕ್ಷಿಕ ಆಯ್.ಎ. ಮಕಂದಾರ, ಪವನಕುಮಾರ ಬೇನೂರ, ಕಾಶೀನಾಥ ತೇರದಾಳ, ರಮೇಶ ರೊಟ್ಟಿ, ಶರಣು ರೊಟ್ಟಿ, ಶರಣು ಕುಂಟೋಜಿ, ಮಲ್ಲು ಸೊನ್ನದ, ಸಿದ್ದಪ್ಪ ಶಹಾಪುರ ಸೇರಿದಂತೆ ಸಿಬ್ಬಂದಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

