ಚಡಚಣ: ಜಿಲ್ಲಾ ಆಡಳಿತ ವಿಜಯಪುರ, ಸ್ವೀಪ್ ಸಮಿತಿ ಹಾಗೂ ಪಟ್ಟಣ ಪಂಚಾಯತಿ ಚಡಚಣ ಇವರ ಸಹಯೋಗದಲ್ಲಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಸಹಿ ಸಂಗ್ರಹಣ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಹಿ ಸಂಗ್ರಹಣ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಎಸ್. ಎಸ್. ಪೂಜಾರಿ ಅವರು ೧೮ ವರ್ಷ ತುಂಬಿದ ಪ್ರತಿಯೊಬ್ಬ ಸ್ತ್ರೀ- ಪುರುಷರು ಮತದಾನ ಮಾಡಲು ಅರ್ಹರಾಗಿದ್ದಾರೆ. ಆದ ಕಾರಣ ಎಲ್ಲ ಮತದಾರ ಬಾಂಧವರು ಬರುವ 2024 ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಕಂದಾಯ ನಿರೀಕ್ಷಕರಾದ ಆರ್.ಬಿ.ಭಂಡಾರಿ, ಶ್ರೀದೇವಿ ಕೊಟ್ಟಲಗಿ, ಅನುಸೂಯಾ ಕಂಟಿಕರ, ರಾಜೇಂದ್ರ ಸುಂಗದಿ, ಮತ್ತು ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಮತ್ತು ಪೌರಕಾರ್ಮಿಕರು ಇದೇ ಸಂದರ್ಭದಲ್ಲಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

