ಆಲಮಟ್ಟಿ: ಭಾನುವಾರ ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ
ಇಲ್ಲಿಯ ಸಂಗೀತ ಕಾರಂಜಿ ಬಳಿ ಸೇರಿದ್ದ ಸಹಸ್ರಾರು ಪ್ರವಾಸಿಗರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಜಿಲ್ಲಾಡಳಿತ ವತಿಯಿಂದ ಭಾನುವಾರ ರಾತ್ರಿ ಜರುಗಿತು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಿಷಿ ಆನಂದ,
ಕಡ್ಡಾಯವಾಗಿ ಎಲ್ಲರೂ ಮತ ಚಲಾಯಿಸಬೇಕು, ಪ್ರಜಾಪ್ರಭುತ್ವ ಆಡಳಿತಕ್ಕಾಗಿ , ದೇಶದ ಅಭಿವೃದ್ಧಿಗಾಗಿ ಎಲ್ಲರೂ ಮತದಾನ ಮಾಡಬೇಕು, ಮತದಾನ ಮಾಡದೇ ತಪ್ಪಿಸಿಕೊಳ್ಳಬಾರದು ಎಂದರು. ಮತದಾನ ಸುಲಲಿತ ನಡೆಯಲು ಜಿಲ್ಲಾಡಳಿತ ಸಜ್ಜಾಗಿದ್ದು, ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದರು.
ವಿಜಯಪುರ ಲೋಕಸಭಾ ಚುನಾವಣಾ ವೆಚ್ಚ ವಿಚಕ್ಷಣಾಧಿಕಾರಿ ಅನುಪಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾವಾಲೆ, ಸಹಾಯಕ ಚುನಾವಣಾಧಿಕಾರಿ ಗಂಗಪ್ಪ, ರಾಜಶೇಖರ ಪವಾರ, ಸಿ.ಆರ್. ಮುಂಡರಗಿ, ಬಿ.ಎಸ್. ಮೂಗನೂರಮಠ, ರಾಮಣ್ಣ ಮತ್ತೀತರರು ಇದ್ದರು.
ಜಿಲ್ಲಾಧಿಕಾರಿ ಸೇರಿದಂತೆ ಎಲ್ಲರೂ ಮತದಾನ ಮಾಡುವ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

