ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಭಾನುವಾರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಮಹಾನ್ ನಾಯಕರಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿಗೆ ಮಾದರಿಯಾದ ಸಂವಿಧಾನದ ನೀಡಿದ್ದಾರೆ. ದೇಶಕ್ಕೆ ನೀಡಿರುವ ಕೊಡುವೆ ಅಪಾರವಾದದ್ದು. ಆ ಕೊಡುಗೆಗಳನ್ನು ಸ್ಮರಿಸುವ ಹಾಗೂ ಅವರ ಉದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ ಪ್ರಾಮಾಣಿಕವಾಗಿ ಮಾಡಿದೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಅಲ್ಪೋಹಾರ, ತಂಪು ಪಾನಿಯ ವ್ಯವಸ್ಥೆ ಮಾಡಲಾಗಿತ್ತು.
ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಕುಮಾರ ಗಡಗಿ, ವಿಠ್ಠಲ ಹೊಸಪೇಟೆ, ಜವಾಹರ ಗೋಸಾವಿ, ಕಿರಣ ಪಾಟೀಲ, ವಿಜಯಪುರ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ, ರೈತ ಮೋರ್ಚಾ ಅಧ್ಯಕ್ಷ ರಾಚು ಬಿರಾದಾರ, ಮುಖಂಡರಾದ ಪಾಂಡುಸಾಹುಕಾರ ದೊಡಮನಿ, ಮಹೇಶ ಒಡೆಯರ, ವಿಕ್ರಮ ಗಾಯಕವಾಡ, ಲಕ್ಷ್ಮಣ ಜಾಧವ, ಮಡಿವಾಳ ಯಾಳವಾರ, ಚಂದ್ರು ಚೌದರಿ, ಉಮೇಶ ವೀರಕರ, ವಿಠ್ಠಲ ನಡುವಿನಕೇರಿ, ಸತೋಷ ತಳಕೇರಿ, ಮನೋಹರ ಕಾಂಬ್ಳೆ, ವಿರೇಶ ವಾಲಿಕಾರ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

