ದೇವರಹಿಪ್ಪರಗಿ: ಮತದಾನ ಎಂಬುದು ಸಂವಿಧಾನ ನಮಗೆ ನೀಡಿರುವ ಹಕ್ಕು ಇದನ್ನು ಸರಿಯಾಗಿ ಪಾಲಿಸೋಣ ಎಂದು ತಾಲ್ಲೂಕು ಪಂಚಾಯಿತಿ ಇಓ ಸಂಜೀವ ಜುನ್ನೂರ ಹೇಳಿದರು.
ತಾಲ್ಲೂಕಿನ ಸಾತಿಹಾಳ ಗ್ರಾಮ ಪಂಚಾಯಿತಿ ನರೇಗಾ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಭಾನುವಾರ ತಾಲ್ಲೂಕು ಸ್ವೀಪ್ ಸಮೀತಿ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದ ಮೂಲಕ ಚುನಾವಣಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಏಳಿಗೆಗಾಗಿ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವುದಕೋಸ್ಕರ ನಾವೆಲ್ಲರೂ ನಮ್ಮ ಕೆಲಸಗಳನ್ನು ಬದಿಗಿಟ್ಟು ಮೇ ೭ ರಂದು ತಪ್ಪದೇ ಮತದಾನ ಮಾಡೋಣ ಎಂದರು.
ಗ್ರಾಮ ಪಂಚಾಯಿತಿ ಪಿಡಿಓ ಎಮ್.ಎನ್.ಕತ್ತಿ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆ ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ೪೫ ಮಹಿಳೆಯರು ೮ ಜನ ಪುರುಷರು ಸಹಿತ ಒಟ್ಟು ೫೩ ಜನ ಕೂಲಿಕಾರ್ಮಿಕರು ಹಾಜರಿದ್ದರು.
ತಾಂತ್ರಿಕ ಸಂಯೋಜಕ ಶರಣಗೌಡ ಪಾಟೀಲ, ಐಇಸಿ ಸಂಯೋಜಕ ಸಿದ್ದು ಕಾಂಬ್ಳೆ, ಅಭಿಯಂತರ ಅರ್ಷದ್ ಕೋಟ್ನಾಳ, ಜಿ.ಎಸ್. ರೋಡಗಿ, ತಾಂಡಾ ರೋಜಗಾರಮಿತ್ರ ವಿನೋದ ರಾಠೋಡ, ಹಣಮಂತ್ರಾಯ ಬಿರಾದಾರ, ಶಿವಾನಂದ ಬಿರಾದಾರ, ಮಹಾದೇವ ಡೋಮನಾಳ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

