ಬಸವನಬಾಗೇವಾಡಿ: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲೂಕಾಡಳಿತ, ತಾಲೂಕು ಸ್ವೀಪ್ ಸಮಿತಿ,ಪುರಸಭೆ ಸಹಯೋಗದಲ್ಲಿ ಭಾನುವಾರ ಮತದಾನ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ಜರುಗಿತು.
ಪಟ್ಟಣದ ಡಾ.ಅಂಬೇಡ್ಕರ ವೃತ್ತದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಡಾ.ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಬೈಕ್ ರ್ಯಾಲಿ ಲಕ್ಷ್ಮೀ ನಗರ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತ, ಬಸವ ಭವನ ಮಾರ್ಗ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ ಮಾರ್ಗವಾಗಿ ತಹಸೀಲ್ದಾರ ಕಚೇರಿಯವರೆಗೆ ತೆರಳಿ ನಂತರ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿತು. ನಂತರ ಮೊಂಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಬಸವೇಶ್ವರ ವೃತ್ತದಲ್ಲಿ ಜರುಗಿದ ಮತದಾನ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಈಗ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಸಂವಿಧಾನ ತಮಗೆ ನೀಡಿರುವ ಮತದಾನ ಎಂಬ ಪವಿತ್ರ ಹಕ್ಕು ಚಲಾಯಿಸುವ ಮೂಲಕ ಪ್ರಾಮಾಣಿಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದರೆ ದೇಶದ ಪ್ರಗತಿಗೆ ಸಹಕಾರಿಯಾಗುತ್ತದೆ. ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕು ಮತದಾರರಿಗೆ ಇದೆ. ಮತದಾನವನ್ನು ಪ್ರತಿಯೊಬ್ಬರೂ ಮಾಡುವ ಮೂಲಕ ಮತದಾನ ಹೆಚ್ಚಳವಾಗುವಂತೆ ಸಹಕರಿಸಬೇಕೆಂದರು.
ತಾಪಂ ಇಓ, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಪ್ರಕಾಶ ದೇಸಾಯಿ ಮಾತನಾಡಿ, ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸುವ ಮೂಲಕ ಮತದಾನದ ಹೆಚ್ಚಳವಾಗುವಂತೆ ಮಾಡಬೇಕು. ೮೫ ಕ್ಕೆ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸುವ ಹಕ್ಕು ಚುನಾವಣಾ ಆಯೋಗ ನೀಡಿದೆ. ಆಯೋಗ ನೀಡಿದ ಸೌಲಭ್ಯಗಳನ್ನು ಮತದಾರರು ಪಡೆದುಕೊಳ್ಳಬೇಕೆಂದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಎಇಇ ಜೆ.ಬಿ.ಕಿರಸೂರ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಸಿ.ಜಿ.ಬಿರಾದಾರ, ಕೃಷಿ ಇಲಾಖೆಯ ಅಧಿಕಾರಿ ಎಂ.ಎಚ್.ಯರಝರಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಭವಾನಿ ಪಾಟೀಲ, ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ವಿಕಲಚೇತನ ಸಂಘದ ಮಲ್ಲಿಕಾರ್ಜುನ ಬಿರಾದಾರ, ಚನ್ನಯ್ಯ ಸಾರಂಗಮಠ, ವಿವಿಧ ಇಲಾಖೆಯ ಅಧಿಕಾರಿಗಳು, ಪುರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಡಿಎಸ್ಎಸ್ ಮುಖಂಡರು ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

