ಸಿಂದಗಿ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಎಲ್ಲರೂ ಮತದಾನ ಮಾಡಬೇಕು ಎಂಬ ಕಾರಣಕ್ಕಾಗಿ ಚುನಾವಣಾ ಆಯೋಗ ವಿಭಿನ್ನವಾಗಿ ಜಾಗೃತಿ ಮೂಡಿಸುವ ಕಾರ್ಯ ನಡೆಸುತ್ತಿದೆ ಎಂದು ಸಹಾಯಕ ಚುನಾವಣಾಧಿಕಾರಿ ವಿನಯ ಪಾಟೀಲ್ ಹೇಳಿದರು.
ಪಟ್ಟಣದಲ್ಲಿ ಸ್ವೀಪ್ ಸಮಿತಿ ಯೋಜನೆಯ ಅಡಿಯಲ್ಲಿ ಹಮ್ಮಿಕೊಂಡ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಈಗಾಗಲೇ ಲೋಕಸಭಾ ಚುನಾವಣೆ ಘೋಷಣೆಯದಾಗಿನಿಂದ ಗ್ರಾಮ ಪಂಚಾಯಿತಿ ಹಂತದಿಂದ ಜಿಲ್ಲಾ ಮಟ್ಟದವರೆಗೆ ಸ್ವೀಪ್ ಚಟುವಟಿಕೆಗಳ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಮತದಾನದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗಿದೆ. ಮತದಾನದ ದಿವಸ ಹೆಚ್ಚಿನ ಜನರನ್ನು ಮತಗಟ್ಟೆಗೆ ಕರೆದುಕೊಂಡು ಬಂದು ಮತ ಚಲಾವಣೆ ಮಾಡಿಸುವುದು ನಮ್ಮ ಗುರಿಯಾಗಿದೆ ಎಂದು ವಿವರಿಸಿದರು.
ಈ ವೇಳೆ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮಾತನಾಡಿದರು.
ಸಹಾಯಕ ಚುನಾವಣಾಧಿಕಾರಿ ವಿನಯ ಪಾಟೀಲ, ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಆಲಮೇಲ ತಹಶೀಲ್ದಾರ್ ಮಹಾದೇವ ಸಣ್ಣಮುರಿ, ತಾಪಂ ಇಒ ಸುಬ್ರಮಣ್ಯ ಶರ್ಮಾ, ಪುರಸಭೆ ಮುಖ್ಯಧಿಕಾರಿ ಗುರುರಾಜ ಚೌಕಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದಾದ್ಯಂತ ಬೈಕ್ ಓಡಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದರು.
ಪಟ್ಟಣದ ತಾಲೂಕು ಆಡಳಿತದಿಂದ ಹೊರಟ ಬೈಕ್ ರ‍್ಯಾಲಿ ವಿವೇಕಾನಂದ ವೃತ್ತದ ಮಾರ್ಗವಾಗಿ ಕನಕದಾಸ ವೃತ್ತ, ಡೋಹರ್ ಕಕ್ಕಯ್ಯ ವೃತ್ತ, ಬಸ್ ನಿಲ್ದಾಣ, ಬಸವೇಶ್ವರ ವೃತ್ತದ ಮಾರ್ಗವಾಗಿ ತಾಲೂಕು ಕಚೇರಿಯ ಹತ್ತಿರ ಮುಕ್ತಾಯಗೊಂಡಿತು.
Subscribe to Updates
Get the latest creative news from FooBar about art, design and business.
Related Posts
Add A Comment

