Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶಕ್ಕೆ ಆರ್ಥಿಕ ಸಂಕಷ್ಟ ತಂದೊಡ್ಡಿದ ಮೋದಿ :ನಾಡಗೌಡ
(ರಾಜ್ಯ ) ಜಿಲ್ಲೆ

ದೇಶಕ್ಕೆ ಆರ್ಥಿಕ ಸಂಕಷ್ಟ ತಂದೊಡ್ಡಿದ ಮೋದಿ :ನಾಡಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಿಣಜಗಿ (ಮುದ್ದೇಬಿಹಾಳ):
ಮೋದಿ ಸರಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್ ಪಕ್ಷದ ಕಳಕಳಿ ಯೋಜನೆಗಳು ಬೇಕೊ ನೀವೇ ನಿರ್ಧರಿಸಿ ಎಂದು ಶಾಸಕ ಹಾಗೂ ಸಾಬೂನು-ಮಾರ್ಜಕ ನಿಗಮದ ಆಧ್ಯಕ್ಷರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.
ಮುದ್ದೇಬಿಹಾಳ ಕ್ಷೇತ್ರದ ಮಿಣಜಗಿಯಲ್ಲಿ ಮಂಗಳವಾರ ನಡೆದ ಜಿಪಂ ವ್ಯಾಪ್ತಿಯ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರ ನುಡಿದಂತೆ ನಡೆದುಕೊಂಡು ಹೆಣ್ಣುಮಕ್ಕಳ, ಯುವಕರ ಮನಸ್ಸು ಗೆದ್ದಿದೆ. ಕೆಲವೇ ತಿಂಗಳಲ್ಲಿ ಹೇಳಿದ್ದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದೆ. ಮೋದಿಯವರು ನೀಡಿದ್ದ ಯಾವೊಂದು ಮಾತನ್ನೂ ಉಳಿಸಿಕೊಂಡಿಲ್ಲ. ಬದಲಾಗಿ ದೇಶಕ್ಕೆ ಆರ್ಥಿಕ ಸಂಕಷ್ಟ ತಂದೊಡ್ಡಿದ್ದಾರೆ ಎಂದು ಹೇಳಿದರು.
ವಿದ್ಯಾವಂತ, ಪ್ರಬುದ್ಧ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ಅದು ವ್ಯರ್ಥವಾಗುವುದಿಲ್ಲ. ದಶಕಗಳ ಮೇಲಾಯ್ತು ಲೋಕಸಭೆಯಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಕಾರಣ ಏನೇ ಇರಲಿ, ಇದೀಗ ನಮ್ಮ ಲೋಕಸಭೆ ಸದಸ್ಯ ಹೇಗಿರಬೇಕು ನೀವು ನಿರ್ಧರಿಸಬೇಕು. ನೀವು ನೀಡಿದ ಮತ ಸಮಾನತೆ, ಸಾಮರಸ್ಯ, ಸುಭದ್ರತೆ ಹಾಗೂ ಅಭಿವೃದ್ಧಿಗೆ ಎಂದು ಹೇಳಿದರು.
ಕೃಷ್ಣಾ ನದಿ ನೀರಿನ ಹಂಚಿಕೆ ಬಗೆಹಸಿಸಲಿಲ್ಲ. ಯಾವೊಂದು ಜ್ವಲಂತ ಸಮಸ್ಯೆಗಳನ್ನು ಬಿಜೆಪಿಯವರು ಬಗೆಹರಿಸಲಿಲ್ಲ. ನೀರಿನ ಬಳಕೆ ಸರಿಯಾಗಿದ್ದರೆ ನಮ್ಮ ಬದುಕು ಬಂಗಾರವಾಗುತ್ತಿತ್ತು. ಒಂದೆಡೆ ರಾಜ್ಯ ಸರಕಾರ ಅನೇಕ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ಕೇಂದ್ರ ಸರಕಾರ ರಾಜ್ಯಕ್ಕೆ ನೆಟ್ಟಗಿನ ಬರ ಪರಿಹಾರ ಕೊಡಲಿಲ್ಲ ಕೋರ್ಟ್ ಛೀಮಾರಿ ಹಾಕುವ ಪ್ರಸಂಗ ಒದಗಿತು. ನೀರಿನ ಪಾಲೂ ಇಲ್ಲ. ಗಡಿ ವಿವಾದವೂ ಬಗೆ ಹರಿಸಲಿಲ್ಲ. ದೇಶದೆಲ್ಲೆಡೆ ವಿಪ್ಲವ ಪರಿಸ್ಥಿತಿ ಇದೆ. ಇಂತಹ ಮೋದಿಯವರ ಸರಕಾರ ನಮಗೆ ಬೇಕೆ? ದೇವರ ಹೆಸರೇಳಿ ಅಧಿಕಾರ ಮಾಡುತ್ತಾರೆ ಇವರಿಗೆ ನಾಚಿಕೆ ಇಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.
ಉದ್ಯೋಗ, ಮೂಲಭೂತ ಸಮಸ್ಯೆ ನೀಗಿಸದೇ ದೇಶ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಆರ್ಥಿಕ ದಿವಾಳಿತನ ಸೃಷ್ಟಿಸಿದೆ. ಹಾಗಾಗಿ ಕಾಂಗ್ರೆಸ್ ನಮಗೆ ಅನಿವಾರ್ಯವಾಗಿದೆ. ಇಂದಿನ ಯುವಕರಿಗೆ ಬುದ್ಧಿ ಹೇಳಿ ಭ್ರಷ್ಟ, ಸುಳ್ಳಿನ ಕೇಂದ್ರ ಸರಕಾರವನ್ನು ಓಡಿಸಬೇಕು. ನಲವತ್ತು ಸಾವಿರ ಕೋಟಿ ರೂ.ಗಳನ್ನು ಬಾಂಡ್‌ಗಳ ಮೂಲಕ ಸಂಗ್ರಹಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಗಟ್ಟಿತನದಿಂದ ಇದು ಹೊರಬಂತು. ಇದರಿಂದ ಸ್ವಚ್ಛತೆ ಮುಖ ಹಾಕಿದವರು ಬಯಲಾಗಿ ಹತಾಶೆಗೊಂಡಿದ್ದಾರೆ. ಅದಕ್ಕಾಗಿ ಬಸವೇಶ್ವರ ಹಾಗೂ ಅಂಬೇಡ್ಕರ್‌ರ ದಾರಿಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಹೇಳಿದರು.
ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, ನಮ್ಮ ಗ್ಯಾರಂಟಿಗಳನ್ನೇ ದೇಶದೆಲ್ಲೆಡೆ ಕಾಪಿ ಮಾಡಲಾಗುತ್ತಿದೆ. ಗ್ಯಾರಂಟಿಗಳಿಂದ ದೇಶ ದಿವಾಳಿ ಆಗುತ್ತೆ ಎಂದು ಟೀಕಿಸಿದ ಮೋದಿಯವರೇ ‘ಮೋದಿ ಗ್ಯಾರಂಟಿ’ ಎಂದು ಪ್ರಚಾರ ಪಡೆಯುತ್ತಿರುವುದು ವಿಪರ್ಯಾಸ. ಇಲ್ಲಿನ ಬಿಜೆಪಿ ಸಂಸದ ಕಳೆದ ಹದಿನೈದು ವರ್ಷಗಳ ಅಧಿಕಾರ ಅನುಭವಿಸಿದರೇ ಹೊರತು ಏನೊಂದು ಕೆಲಸ ಮಾಡಲಿಲ್ಲ ಎಂದರು.
‘ನೀವು ನನ್ನ ಮೇಲೆ ವಿಶ್ವಾಸ ಇಟ್ಟರೆ ನಿಮ್ಮ ಜೀತದ ಆಳಾಗಿ ದುಡಿಯುತ್ತೇನೆ. ಜಿಲ್ಲೆಗೆ ಬೇಕಿರುವ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತೇನೆ. ಈ ಸಲ ಜಿಲ್ಲೆಗಾಗಿ ಬದಲಾವಣೆ ಮಾಡಿ. ನನಗೆ ಕೊಡುವ ಮತ ನಾಡಗೌಡರಿಗೆ, ಸಿದ್ದರಾಮಯ್ಯರ ಕಾಳಜಿಗೆ’ ಎಂದು ಮನವಿ ಮಾಡಿದರು.
ಶಿವಶಂಕರಗೌಡ ಹಿರೇಗೌಡ ಪ್ರಸ್ತಾವಿಕ ಮಾತನಾಡಿ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಸಾಫಲ್ಯತೆ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಭರವಸೆಗಳನ್ನು ವಿವರಿಸಿದರು. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಎಸ್.ಹುಲ್ಲೂರ ಮಾತನಾಡಿ, ತಕ್ಕಡಿಯಲ್ಲಿ ತೂಗಿ ಯಾರಿಂದ ಕೆಲಸವಾಗುತ್ತದೆ ಎಂದು ಯೋಚಿಸಿ ಅವರಿಗೆ ನಿಮ್ಮ ಪವಿತ್ರ ಮತ ನೀಡಿ ಎಂದು ಕೋರಿದರು.
ಹಿರಿಯ ಮುಖಂಡರಾದ ಬಿ.ಎಸ್. ಪಾಟೀಲ ಯಾಳಗಿ, ಶಕೀಲ್ ಖಾಜಿ, ಅಕ್ಕಮಹಾದೇವಿ ಕಟ್ಟಿಮನಿ, ಸಿದ್ದನಗೌಡ ಪಾಟೀಲ, ಸಿ.ಬಿ.ಅಸ್ಕಿ, ಕಾಶೀಂ ಪಟೇಲ, ಜೆ.ಬಿ. ಪಾಟೀಲ, ಅಶೋಕಗೌಡ ಪಾಟೀಲ, ಬಸವನಗೌಡ ಬಗಲಿ, ಶಿವಾನಂದಯ್ಯ ಹಿರೇಮಠ, ಐ.ಜಿ.ಯರನಾಳ ಅನೇಕರಿದ್ದರು.
ವೀರೇಶ ಪಾಟೀಲ ಸ್ವಾಗತಿಸಿದರು,

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.