ವಿಜಯಪುರದಲ್ಲಿ ಮತದಾನ ಜಾಗೃತಿ ಮೂಡಿಸಲು ಕ್ಯಾಂಡಲ್ ಮಾರ್ಚ್ ಜಾಥಾ
ವಿಜಯಪುರ: ಮತದಾನ ಮಾಡಿ ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ಮಹಾನಗರ ಪಾಲಿಕೆ ವಿಜಯಪುರ ಹಾಗೂ ಇವರ ಸಹಯೋಗದಲ್ಲಿ ಲೋಕಸಭಾ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸಲು ಹಮ್ಮಿಕೊಂಡ ಕ್ಯಾಂಡಲ್ ಮಾರ್ಚ್ ಜಾಥಾ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು.
ಎಲ್ಲರೂ ತಪ್ಪದೇ ಮತದಾನ ಮಾಡುವುದರ ಜೊತೆಗೆ ನೆರೆಹೊರೆಯವರನ್ನು ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಪ್ರಜ್ಞಾವಂತ ನಾಗರೀಕರಾಗಿ ದೇಶದ ಏಳಿಗೆಗ ಮತದಾನ ಮಾಡುವುದನ್ನು ಮರೆಯಬಾರದು ಎಂದು ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ವಿಜಯಪುರ ನಗರ ಲೋಕಸಭಾ ಮತಕ್ಷೇತ್ರ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅಶಾದ ಉರ್ ರೆಹಮಾನ್ ಶರೀಫ್ ಮಾತನಾಡಿದರು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಹೃದಯ ಭಾಗವಾಗಿರುವ ಗಾಂಧಿ ವೃತ್ತದವರೆಗೆ ಮತದಾನ ಜಾಗೃತಿಗಾಗಿ ಮೆಣದ ಬತ್ತಿ ಬೆಳಗುವ ದೀಪ ಅಥವಾ ಕ್ಯಾಂಡಲ್ ಮಾರ್ಚ್ ಜಾಥಾ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ ಮತದಾರರಿಗೆ ಪ್ರತಿಜ್ಞಾವಿಧಿಯನ್ನು ಭೋಧಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳಾದ ಸಿ. ಆರ್ ಮುಂಡರಗಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಎ. ಬಿ ಅಲ್ಲಾಪೂರ, ವಿಜಯಪುರ ತಾ.ಪಂ. ಇಓ ಕೆ. ಹೊಂಗಯ್ಯ, , ತಾಲೂಕ ವೈದ್ಯಾಧಿಕಾರಿಗಳು ಹಿಟ್ನಳ್ಳಿ ಬಸವರಾಜ ಜಗಳೂರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಘಟಕದ ನೋಡಲ್ ಅಧಿಕಾರಿಗಳಾದ ಪ್ರಕಾಶ ರಾಠೋಡ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಗಳಾದ ಸಾಕ್ಷಿ ಹಿರೇಮಠ, ರಾಜೇಶ ಪವಾರ, ಸಹನಾ ಕುಡಿಗನೂರ, ಮಹಾನಗರ ಪಾಲಿಕೆಯ ಸಂಘಟನಾಧಿಕಾರಿಗಳಾದ ಸಾವಿತ್ರಿ ತಿಪ್ಪನ್ನವರ್, ಭಾರತೀಯ ಕೌಲ್ಗೆ, ಸಿಆರ್‌ಪಿಗಳಾದ ಪ್ರಗತಿ ಕುಲಕರ್ಣಿ ಪ್ರಿಯಾಂಕ ಪಾಟೀಲ್ ಶ್ವೇತಾ ತೆಲ್ಸಂಗ ಮಮತಾ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸ್ವ ಸಹಾಯ ಸಂಘಗಳ ಮಹಿಳೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

