Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೮-೧೯ರಂದು ಸಿಇಟಿ ಪರೀಕ್ಷೆವ್ಯವಸ್ಥಿತವಾಗಿ ನಡೆಸಿ :ಎಡಿಸಿ
(ರಾಜ್ಯ ) ಜಿಲ್ಲೆ

ಏ.೧೮-೧೯ರಂದು ಸಿಇಟಿ ಪರೀಕ್ಷೆವ್ಯವಸ್ಥಿತವಾಗಿ ನಡೆಸಿ :ಎಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿವಿಧ ವೃತ್ತಿಪರ ಕೋರ್ಸಗಳ ಪ್ರವೇಶಾತಿಗೆ ಇದೇ ಏಪ್ರಿಲ್ ೧೮ ಹಾಗೂ ೧೯ ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು (ಸಿಇಟಿ) ವಿವಿಧ ೨೩ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಅಚ್ಚುಕಟ್ಟು ಹಾಗೂ ವ್ಯವಸ್ಥಿತವಾಗಿ ನಡೆಸುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದರು.
ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ವಿಜಯಪುರ ನಗರದ ೨೧ ಹಾಗೂ ಬಬಲೇಶ್ವರ ಮತ್ತು ತಿಕೋಟಾದಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು ೨೩ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ ಎಂದು ಹೇಳಿದರು.
ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಟ್ಟು ೧೧೯೬೬ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಏ.೧೮ ರಂದು ಬೆಳಿಗ್ಗೆ ೧೦-೩೦ರಿಂದ ೧೧-೫೦ರವರೆಗೆ ಜೀವಶಾಸ್ತ್ರ, ಹಾಗೂ ಮಧ್ಯಾಹ್ನ ೨-೩೦ರಿಂದ ೩-೫೦ರವರೆಗೆ ಗಣಿತ ಪರೀಕ್ಷೆಗಳು ಜರುಗಲಿವೆ. ಅದರಂತೆ ಏ.೧೯ರಂದು ಬೆಳಿಗ್ಗೆ ೧೦-೩೦ರಿಂದ ೧೧-೫೦ರವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ ೨-೩೦ರಿಂದ೩-೫೦ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ಜರುಗಲಿದ್ದು, ಪ್ರತಿ ೨೪ ವಿದ್ಯಾರ್ಥಿಗಳಿಗೆ ಓರ್ವ ಕೊಠಡಿ ಮೇಲ್ವಿಚಾರಕರನ್ನು ನೇಮಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷೆಗೆ ನಿಯೋಜಿತ ಸಂಬAಧಿಸಿದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ನಿಗದಿತ ವಿದ್ಯಾರ್ಥಿಗಳಿಗನುಗುಣವಾಗಿ ಸೂಕ್ತ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿಯಲ್ಲಿ ಸರಿಯಾದ ಗಾಳಿ-ಬೆಳಕಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮಗೆ ನಿಗದಿತ ಆಸನಗಳಲ್ಲಿಯ ಕುಳಿತುಕೊಳ್ಳುವಂತೆ ನೋಡಿಕೊಳ್ಳಬೇಕು. ಕಡ್ಡಾಯವಾಗಿ ಪ್ರವೇಶ ಪತ್ರವನ್ನು ಪರಿಶೀಲನೆ ನಡೆಸಿ ಪ್ರವೇಶಾವಕಾಶ ಒದಗಿಸಬೇಕು ಪರೀಕ್ಷೆ ಅವಧಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರಂತೆ ಒಟ್ಟು ೨೩ ವೀಕ್ಷಕರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಉಪ ಮುಖ್ಯ ಅಧೀಕ್ಷಕರು, ಓರ್ವ ಪ್ರಶ್ನೆ ಪತ್ರಿಕೆ ಪಾಲಕರು ಮತ್ತು ಓರ್ವ ವಿಶೇಷ ಸ್ಥಾನಿಕ ಜಾಗೃತ ದಳ ಸದಸ್ಯರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಿ, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಬೇಕು. ಪರೀಕ್ಷೆಗೆ ನಿಯೋಜಿತ ಎಲ್ಲ ವೀಕ್ಷಕರು, ಮೇಲ್ವಿಚಾರಕರು, ಉಪ ಮುಖ್ಯ ಅಧೀಕ್ಷಕರುಗಳು ವೀಕ್ಷಣಾಧಿಕಾರಿಗಳು, ಜಾಗೃತದಳದ ಅಧಿಕಾರಿಗಳು, ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿಗಳು, ಸಹ ಮುಖ್ಯ ಅಧಿಕ್ಷಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಎಲ್ಲ ಅಧಿಕಾರಿಗಳು ಯಾವುದೇ ಲೋಪಗಳಿಗೆ ಅವಕಾಶ ನೀಡದೇ ನಿಯಮಾನುಸಾರ ಜವಾಬ್ದಾರಿಯಿಂದ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾರ ಅವರು ಮಾತನಾಡಿ, ಜಿಲ್ಲೆಯ ಎಲ್ಲ ೨೩ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಲೋಪಗಳಿಗೆ ಅವಕಾಶ ನೀಡದೇ ಪೊಲೀಸ್ ಸಿಬ್ಬಂದಿಗಳ ಸಹಕಾರ ಪಡೆದು ಕಟ್ಟುನಿಟ್ಟಿನ ಕ್ರಮ ವಹಿಸಿ ಯಶಸ್ವಿಯಾಗಿ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪ ನಿರ್ದೇಶಕ ಎಲ್.ಆರ್. ಹಳ್ಳದಮನಿ, ಖಜಾನೆ ಇಲಾಖೆ ಉಪನಿರ್ದೇಶಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.