ಮುದ್ದೇಬಿಹಾಳ: ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಲಿ ರೂ.೩೪೯ಕ್ಕೆ ಹೆಚ್ಚಳವಾಗಿದ್ದು, ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕು ನೂರು ದಿನಗಳ ಅನುಭವ ವಿಲ್ಲದ ಕೆಲಸ ನೀಡಲಾಗುವುದು. ನರೇಗಾ ಕೂಲಿಕಾರರು ಗ್ರಾಮ ಪಂಚಾಯತಿಗಳಿಗೆ ಕೆಲಸದ ಬೇಡಿಕೆ ಅರ್ಜಿಗಳನ್ನು ಸಲ್ಲಿಸಿ ಯೋಜನೆಯ ಪಾಲುದಾರರಾಗಿ ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ ಕರೆ ನೀಡಿದರು.
ತಾಲೂಕಿನ ಬಸರಕೋಡ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯತ ಹಾಗೂ ತಾಲೂಕು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಕಾರ್ಯಕ್ರಮ ಸಹಯೋಗದಲ್ಲಿ ಬುಧವಾರ ನಡೆದ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೂಲಿಕಾರರ ದಿನದ ಕೂಲಿ ೩೧೬ ರಿಂದ ೩೪೯ಕ್ಕೆ ಏರಿಕೆಯಾಗಿದೆ. ವರ್ಷಕ್ಕೆ ೧೦೦ ದಿನ ಕೆಲಸ ಮಾಡಿದರೆ ರೂ. ೩೪,೯೦೦ ಕೂಲಿ ಹಣ ಪಡೆದುಕೊಳ್ಳಬಹುದು. ಗ್ರಾಮೀಣ ಕುಟುಂಬಗಳಿಗೆ ನರೇಗಾ ಯೋಜನೆ ಸಹಕಾರಿಯಾಗಿದೆ. ಯೋಜನೆ ಬಗ್ಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಪ್ರಚಾರ ಮಾಡಿ ಕೂಲಿಕಾರರು ಕೆಲಸಕ್ಕೆ ಬರುವಂತೆ ಪ್ರೇರೆಪಿಸಬೇಕು. ಬರಗಾಲವನ್ನು ಸಮರ್ಥವಾಗಿ ಎದುರಿಸಲು ನರೇಗಾ ಯೋಜನೆ ಸಹಕಾರಿಯಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಮತದಾನ ಕುರಿತು ಜಾಗೃತಿ ಮೂಡಿಸಿ ಮೇ-೦೭ ರಂದು ತಪ್ಪದೆ ಮತದಾನ ಮಾಡುವಂತೆ ತಿಳಿಸಿ “ಮತದಾನ ಪ್ರತಿಜ್ಞೆ ವಿಧಿ” ಬೋಧಿಸಲಾಯಿತು. ತಾಲೂಕು ಪಂಚಾಯತ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಪಿಡಿಒ ಶ್ರೀಮತಿ ಭಾರತಿ ಸಿನ್ನೂರ, ಕಾರ್ಯದರ್ಶಿ ಆನಂದ, ಡಾಟಾ ಎಂಟ್ರಿ ಆಪರೇರ‍್ಗಳು (ಡಿಇಒ), ಎನ್‌ಆರ್‌ಜಿ ಸಹಾಯಕ ಸಿಬ್ಬಂದಿಗಳು (ಬಿಎಫ್‌ಟಿ), ಗ್ರಾ.ಪಂ ಸಿಬ್ಬಂದಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

