ವಿಜಯಪುರ: ವಿಜಯಪುರ ಲೋಕಸಭಾ ಚುನಾವಣೆ-೨೦೨೪ರ ವೆಚ್ಚ ವೀಕ್ಷಕ ಐ.ಆರ್.ಎಸ್‌ನ ಅಧಿಕಾರಿ ಅನುಪಕುಮಾರ ರವರು ಗುರುವಾರ ಬಬಲೇಶ್ವರ ಮತಕ್ಷೇತ್ರ ವ್ಯಕ್ತಿಯ ಕನಮಡಿ ಚೆಕ್ ಪೋಸ್ಟ್ ಪರಿಶೀಲಿಸಿದರು.
ಚೆಕ್‌ಪೋಸ್ಟಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಯ ಹಾಜರಾತಿ, ಶಾಮಿಯಾನ, ಕುಡಿಯುವ ನೀರು ಸೇರಿದಂತೆ ಚೆಕ್‌ಪೋಸ್ಟ್ಗಳ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಚೆಕ್‌ಪೋಸ್ಟಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಚೆಕ್‌ಪೋಸ್ಟಳಿಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಪಾಳಿ ಅನುಸಾರ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

