ಸೆಕ್ಟರ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ದಾನಮ್ಮನವರ ಸೂಚನೆ
ವಿಜಯಪುರ: ಮುಂಬರುವ ಚುನಾವಣೆಗೆ ನಿಯೋಜಿತ ಸೆಕ್ಟರ್ ಅಧಿಕಾರಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಕ್ಲೀಷ್ಟಕರ ಹಾಗೂ ಕಷ್ಟಕರ ಪರಿಸ್ಥಿತಿಯನ್ನು ನಿಭಾಯಿಸುವ ಕೌಶಲ್ಯ ರೂಢಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಬಗ್ಗೆ ಸಮಗ್ರ ಜ್ಞಾನ ಹೊಂದುವ ಮೂಲಕ ಪಾರದರ್ಶಕ ಚುನಾವಣೆಗೆ ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಮತದಾನ ಪೂರ್ವಸಿದ್ಧತೆ ಹಾಗೂ ಚುನಾವಣೆಗೆ ನಿಯೋಜಿತ ೨೯-ಬಬಲೇಶ್ವ್ವರ, ೩೦-ಬಿಜಾಪುರ ನಗರ, ೩೧-ನಾಗಠಾಣ ಮತಕ್ಷೇತ್ರದ ಸೆಕ್ಟರ್ ಅಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಿಯೋಜಿತ ಅಧಿಕಾರಿಗಳು ಆಯೋಗದ ಮಾರ್ಗಸೂಚಿಯಂತೆ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ಆಯೋಜಿಸಲಾದ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮತಗಟ್ಟೆ ವ್ಯಾಪ್ತಿ ಸೇರಿದಂತೆ ಸಿಬ್ಬಂದಿ ಮತಗಟ್ಟೆಯಲ್ಲಿನ ಮೂಲ ಸೌಕರ್ಯಗಳ ನಿಖರ ಮಾಹಿತಿ ಹೊಂದಿರಬೇಕು. ಗೊಂದಲವಿದ್ದರೆ ತರಬೇತಿಯಲ್ಲಿ ಪರಿಹರಿಸಿಕೊಳ್ಳಬೇಕು. ಸೆಕ್ಟರ್ ಅಧಿಕಾರಿಗಳು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಚುನಾವಣಾ ಕಾರ್ಯಕ್ಕೆ ನಿಯೋಜಿತ ಸೆಕ್ಟರ್ ಅಧಿಕಾರಿಗಳಿಗೆ ಪಿಪಿಟಿ ಮೂಲಕ ತರಬೇತಿ ನೀಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ, ಡಿಡಿಪಿಐ ಉಮೇಶ ಶಿರಹಟ್ಟಿಮಠ ಸೇರಿದಂತೆ ಅಧಿಕಾರಿಗಳಿದ್ದರು.