ಸಿಂದಗಿ: ಯಾವುದೇ ಆಸೆ ಆಕಾಂಕ್ಷೆಗಳಿಗೆ ಒಳಗಾಗದೇ ಒಳ್ಳೆಯ ಅಭ್ಯರ್ಥಿಗೆ ಮತ ಚಲಾವಣೆ ಮಾಡುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ತಾಪಂ ಇಒ ಸುಬ್ರಮಣ್ಯ ಶರ್ಮಾ ಹೇಳಿದರು.
ತಾಲೂಕಿನ ಹಿಕ್ಕಣಗುತ್ತಿ ಗ್ರಾಪಂ ವ್ಯಾಪ್ತಿಯ ಬಬಲೇಶ್ವರ ಗ್ರಾಮದ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ತಾಪಂ ಮತ್ತು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು, ನರೇಗಾ ಕೂಲಿ ಕಾರ್ಮಿಕರಿಗೆ ಬೇಸಿಗೆ ಇರುವದರಿಂದ ಕೆಲಸದಲ್ಲಿ ರಿಯಾಯಿತಿ ಇದ್ದು ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಬರುವಂತೆ ತಿಳಸಿದರು. ಹಾಗೂ ಬೇಸಿಗೆಯಲ್ಲಿ ನಿರಂತರ ಕೆಲಸ ನೀಡುತ್ತದೆ ಇದರ ಸದುಪಯೋಗ ಪಡೆಯಬೇಕು ಎಂದರು.
ಇದೇ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಶಿವಶರಣ ವಂದಗನೂರ್, ಶಂಕರ ಪೂಜಾರಿ, ಭೀಮರಾಯ ಚೌಧರಿ, ಬಸವರಾಜ್, ಆನಂದ, ಆರಿಫ್ ಸೇರಿದಂತೆ ಪಂಚಾಯತ್ ಸಿಬ್ಬಂದಿಗಳು, ನರೇಗಾ ಕಾಯಕ ಬಂಧುಗಳು ಮತ್ತು ಕೂಲಿ ಕಾರ್ಮಿಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

