Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಸಿನ ಮನೆ ವೀಕ್ಷಿಸಿದ ಸಿಇಒ ರಿಶಿ ಆನಂದ
(ರಾಜ್ಯ ) ಜಿಲ್ಲೆ

ಕೂಸಿನ ಮನೆ ವೀಕ್ಷಿಸಿದ ಸಿಇಒ ರಿಶಿ ಆನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಯಂದಿರು ನಿರ್ಬೀತಿಯಿಂದ ನರೇಗಾ ಕಾಮಗಾರಿಗಳಲ್ಲಿ ತೊಡಗಿಕೊಳ್ಳಿ:ಸಿಇಒ

ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಮೂರು ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲು ಜಿಲ್ಲೆಯಲ್ಲಿ ೧೬೩ ಕೂಸಿನ ಮನೆಗಳನ್ನು ಪ್ರಾರಂಭ ಮಾಡಲಾಗಿದೆ. ಅದೇ ರೀತಿ ಬೆನಕನಹಳ್ಳಿ ಗ್ರಾಮ ಪಂಚಾಯಿತಿಹ ವ್ಯಾಪ್ತಿಯಲ್ಲಿಯೂ ಸಹ ಕೂಸಿನ ಮನೆಯನ್ನು ಪ್ರಾರಂಭಿಸಲಾಗಿದೆ. ಎಲ್ಲರೂ ನಿಮ್ಮ ಮೂರು ವರ್ಷದ ಒಳಗಿನ ಮಕ್ಕಳನ್ನು ಕೂಸಿನ ಮನೆಯಲ್ಲಿ ಬಿಟ್ಟು ನರೇಗಾ ಕೆಲಸ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಶುಕ್ರವಾರ ಅವರು ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.
ಕೂಸಿನ ಮನೆಯಲ್ಲಿ ನಿಮ್ಮ ಮಕ್ಕಳನ್ನು ನೋಡಿಕೊಳ್ಳಲು ಮತ್ತು ಆರೈಕೆ ಮಾಡಲು ಪ್ರತ್ಯೇಕವಾಗಿ ಮಕ್ಕಳ ಆರೈಕೆದಾರರನ್ನು ಆಯ್ಕೆ ಮಾಡಲಾಗಿದೆ. ಅಲ್ಲಿ ಮಕ್ಕಳ ಆರೈಕೆದಾರರು ಮಕ್ಕಳಿಗೆ ಆಟ-ಪಾಠ, ಪಾಲನೆ-ಪೋಷಣೆ, ವೈಯಕ್ತಿಕ ಸ್ವಚ್ಛತೆ ಕಡೆಗೆ ವಿಶೇಷ ಗಮನ ನೀಡುತ್ತಾರೆ. ಕಾರ್ಮಿಕರು ನಿರ್ಭೀತಿಯಿಂದ ನಿಮ್ಮ ಮಕ್ಕಳನ್ನು ಕೂಸಿನ ಮನೆಗಳಲ್ಲಿ ಬಿಟ್ಟು ನೆಮ್ಮದಿಯಿಂದ ಕೆಲಸ ಮಾಡಬಹುದು. ನರೇಗಾದಡಿ ಹೆಚ್ಚು ಕೆಲಸ ನಿರ್ವಹಿಸಿ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಿ, ಪ್ರತಿದಿನ ಮಹಿಳೆಯರಿಗೆ ಹಾಗೂ ಪುರುಷರಿಗೆ ಸಮಾನ ಕೂಲಿ ರೂ. ೩೪೯ ಇದೆ. ಎಲ್ಲರೂ ಈ ಸೌಲಭ್ಯವನ್ನು ಪಡೆದು ಅಭಿವೃದ್ಧಿಯತ್ತ ಸಾಗಬೇಕು. ಹಾಗೆಯೇ ವಿಶೇಷ ಚೇತನರು, ಹಿರಿಯ ನಾಗರಿಕರು ಹಾಗೂ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ನರೇಗಾ ಯೋಜನೆಯ ಕೆಲಸದಲ್ಲಿ ಶೇ.೫೦ ರಷ್ಟು ರಿಯಾಯತಿ ನೀಡಲಾಗಿದೆ. ಆದ್ದರಿಂದ ಎಲ್ಲರೂ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.
ನಂತರ ಬೆನಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಗ್ರಂಥಾಲಯಕ್ಕೆ ಬೇಟಿ ನೀಡಿ ಅಲ್ಲಿನ ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರು, ಪುಸ್ತಕಗಳು ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ, ಗ್ರಂಥಾಲಯದ ಮುಂಭಾಗದಲ್ಲಿ ಖಾಲಿ ಜಾಗೆಯಲ್ಲಿ ವಿವಿಧ ರೀತಿಯ ಸಸಿಗಳನ್ನು ಬೆಳೆಸಿ ಉದ್ಯಾನವನ ನಿರ್ಮಾಣ ಮಾಡಿ ಮುಕ್ತ ಗ್ರಂಥಾಲಯ ಮಾಡಲು ಸೂಚಿಸಿದರು.
ಈ ವೇಳೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಸಿನ ಮನೆ ಎಂಬ ಶಿರ್ಷಿಕೆಯಡಿ ಪ್ರಾರಂಭವಾಗಿರುವ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಕೂಸಿನ ಮನೆ ಕಟ್ಟಡ ಹಾಗೂ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಇದೇ ವೇಳೆ ಮಕ್ಕಳ ಹಾಜರಾತಿ, ಮಕ್ಕಳಿಗೆ ನೀಡುತ್ತಿರುವ ಆಹಾರ, ಆಟಿಕೆ ಸಾಮಾನುಗಳನ್ನು, ಕೂಸಿನ ಮನೆ ಕಡತಗಳನ್ನು ಪರಿಶೀಲಿಸಿದರು.
ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ವ್ಯವಸ್ಥಿತವಾಗಿ ಪೌಷ್ಠಿಕ ಆಹಾರ ಒದಗಿಸಬೇಕು. ಆಟದ ಸಮುಯದಲ್ಲಿ ಮಕ್ಕಳಿಗೆ ಆಟಿಕೆ ಸಾಮಾನುಗಳನ್ನು ವಿತರಿಸಬೇಕು, ಕೂಸಿನ ಮನೆಯ ಗೋಡೆಗಳ ಮೇಲೆ ಇನ್ನೂ ಹೆಚ್ಚಿನ ಆಕರ್ಷಕ ಚಿತ್ರಗಳು, ವರ್ಣಮಾಲೆಗಳು ಹಾಗೂ ಮೂಲಾಕ್ಷರಗಳನ್ನು ಬಿಡಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಬಳಿಕ ಗ್ರಂಥಾಲಯದ ಮುಂಭಾಗದಲ್ಲಿರುವ ಜಲಜೀವನ ಮಿಷನ್ ಯೋಜನೆಯಡಿ ನಿರ್ಮಾಣವಾದ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಸಿ. ಆರ್. ಮುಂಡರಗಿ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೀಲಗಂಗಾ ಬಬಲಾದ, ಸಹಾಯಕ ನಿರ್ದೇಶಕರು(ಗ್ರಾ.ಉ) ಸಂಜಯ ಖಡಗೇಕರ, ರೂಗಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಬಸವರಾಜ ಬಬಲಾದ, ಬೆನಕನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ ರಾಠೋಡ, ಕೂಸಿನ ಮನೆಯ ಮಕ್ಕಳ ಆರೈಕೆದಾರರು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026

ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ

ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..

ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 25, 2026
    In ದಿನಪತ್ರಿಕೆ
  • ವಿದ್ಯಾರ್ಥಿ ಜೀವನ ಅಮೂಲ್ಯ, ಅದು ವ್ಯರ್ಥವಾಗದಿರಲಿ
    In ವಿಶೇಷ ಲೇಖನ
  • ಆಸೆ ಹೇಳುವಾಸೆ ಹೇಳಲಾರೆ ನಾನು ತಾಳಲಾರೆ..
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಚಿಮ್ಮಡ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಆಲಮೇಲ ಗ್ರಾಮೀಣಾಭಿವೃದ್ಧಿ ಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಶ್ರೀ ವೀರಭದ್ರೇಶ್ವರ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಂಚಾಯತ್ ರಾಜ್ ವ್ಯವಸ್ಥೆ ಪ್ರಜಾಪ್ರಭುತ್ವದ ಮೂಲಾಧಾರ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ: ಕಲಕೇರಿ ಆದರ್ಶ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪಾವಿತ್ರ್ಯತೆ, ಪರಿಶುದ್ಧತೆ ಕಂಡುಕೊಳ್ಳುವ ಹಜ್ ಯಾತ್ರೆ :ನದಾಫ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.