Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲರೂ ತಪ್ಪದೇ ಮತದಾನ ಮಾಡಿ :ಸಿಇಓ ರಿಷಿ ಆನಂದ
(ರಾಜ್ಯ ) ಜಿಲ್ಲೆ

ಎಲ್ಲರೂ ತಪ್ಪದೇ ಮತದಾನ ಮಾಡಿ :ಸಿಇಓ ರಿಷಿ ಆನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಮಗಾಗಿ, ನಮ್ಮ ಭವಿಷ್ಯಕ್ಕಾಗಿ, ನಮ್ಮ ಸಮಾಜಕ್ಕಾಗಿ ಮತ್ತು ನಮ್ಮ ದೇಶಕ್ಕಾಗಿ ಮತದಾನ ಮಾಡಿ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಕಾರ್ಯನಿವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ತಾಲೂಕ ಆಡಳಿತ ಹಾಗೂ ತಾಲೂಕ ಸ್ವೀಪ್ ಸಮಿತಿ ಇಂಡಿ ಇವರ ಸಹಯೋಗದಲ್ಲಿ ಲೋಕಸಭಾ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಇಂಡಿ ತಾಲೂಕಿನ ಮಿನಿ ಆಡಳಿತ ಸೌಧದಿಂದ ರಂಗೋಲಿ ವೀಕ್ಷಣೆ ಹಾಗೂ ಹೀಲಿಯಂ ಬಲೂನ್ ಹಾರಿಸುವುದರ ಮೂಲಕ ಮತದಾನ ಜಾಗೃತಿ ಜಾಥಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು. ನಿಮ್ಮ ಪ್ರತಿಯೊಂದು ಮತ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸುತ್ತ ಮುತ್ತಲಿನ ಎಲ್ಲ ಜನರಿಗೂ ಸಹ ಮತದಾನ ಮಾಡುವಂತೆ ತಿಳಿಸಬೇಕು. ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಬೇಕು ಎಂದರು.
ಇಂಡಿ ತಾಲೂಕು ಉಪ ವಿಭಾಗಾಧಿಕಾರಿಗಳಾದ ಅಭಿದ ಗದ್ಯಾಳ ಮಾತನಾಡಿ, ಲೋಕಸಭಾ ಚುನಾವಣೆ-೨೦೨೪ರಲ್ಲಿ ಶೇ.೧೦೦ ರಷ್ಟು ಮತದಾನ ಆಗಬೇಕು. ಪ್ರತಿಯೊಬ್ಬರೂ ಮತದಾನ ಮಾಡಿ. ಯಾರು ಮತದಾನದಿಂದ ಹೊರಗುಳಿಯಬಾರದು. ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಿ ಮತದಾನ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದರು.
ತಾಲೂಕ ಆಡಳಿತ ಸೌಧದಿಂದ ತಾಲೂಕ ಪಂಚಾಯತಿ ಕಾರ್ಯಾಲಯದವರೆಗೆ ಮೊದಲಿಗೆ ರಂಗೋಲಿ ಚಿತ್ರಗಳಿಂದ ಪ್ರಾರಂಭವಾಗಿ ಹೀಲಿಯಂ ಬಲೂನ್ ಹಾರಿಸುವುದು, ೪೦೦ ಮೀಟರ ಉದ್ದದ ಪ್ರಜಾಪ್ರಭುತ್ವ ಹಬ್ಬ, ನನ್ನ ಮತ ನನ್ನ ಹಕ್ಕು ಧ್ವಜದ ಮೆರವಣಿಗೆ, ಮತದಾನ ಜಾಗೃತಿ ರಥ ಯಾತ್ರೆ, ಸ್ವಚ್ಛವಾಹಿನಿಗಳಲ್ಲಿ ಮತದಾನ ಜಾಗೃತಿಯ ಜಿಂಗಲ್ಸ್ ಹಾಡುಗಳ ಪ್ರಸಾರ, ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ, ಮತದಾನ ಜಾಗೃತಿಯ ಪ್ಲೇಕಾರ್ಡ್ ಗಳನ್ನು ಹಿಡಿದು ಘೋಷ ವಾಖ್ಯಗಳನ್ನು ಕೂಗುವುದರ ಮೂಲಕ, ಕಡಿಮೆ ಮತದಾನ ವಾಗಿರುವ ವಾರ್ಡ್ಗಳಲ್ಲಿ ರಥ ಸಂಚಾರ ಹಾಗೂ ಜನರಲ್ಲಿ ಮತದಾನ ಮಾಡುವಂತೆ ಮನವಿ ಹೀಗೆ ಅತೀ ವಿಜೃಂಭಣೆಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಮತದಾನ ಜಾಗೃತಿ ಜಾಥಾವು ಇಂಡಿ ಆಡಳಿತ ಸೌಧದಿಂದ ಪ್ರಾರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ವೃತ್ತ-ಅಂಬೇಡ್ಕರ ವೃತ್ತ-
ಮಹಾವೀರ ವೃತ್ತ-ಗಾಂಧಿ ವೃತ್ತ, ಕಡಿಮೆ ಮತದಾನವಾಗಿರುವ ಶಾಂತೇಶ್ವರ ದೇವಸ್ಥಾನ ಮಾರ್ಗವಾಗಿ-ಮತದಾನ ಜಾಗೃತಿ ಜಾಥಾ ಅಭಿಯಾನ ಅಂಚೆ ಕಛೇರಿ ಮಾರ್ಗವಾಗಿ ತಾಲೂಕ ಪಂಚಾಯತಿ ಕಾರ್ಯಾಲಯದವರೆಗೆ ಬಂದು ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳಾದ ಸಿ. ಆರ್. ಮುಂಡರಗಿ, ಇಂಡಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರು(ಗ್ರಾ.ಉ) ಸಂಜಯ ಖಡಗೇಕರ, ರೂಗಿ ಗ್ರಾಮ ಪಂಚಾಯತಿಯ ಬಸವರಾಜ ಬಬಲಾದ, ತಾಲೂಕು ಆಡಳಿತ ಅಧಿಕಾರಿಗಳು, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೀಲಗಂಗಾ ಬಬಲಾದ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಗಳಾದ ಸಹನಾ ಕುಡಿಗನೂರ, ರಾಜೇಶ ಪವಾರ, ಜಿಲ್ಲಾ ಪಂಚಾಯತಿಯ ಸಿಬ್ಬಂದಿಯವರು, ತಾಲೂಕು ಮಟ್ಟದ ಎಲ್ಲಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಯವರು, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು, ಸ್ವ-ಸಹಾಯ ಸಂಘದ ಮಹಿಳೆಯರು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.