ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಏ.೨೦ರಂದು ಮಧ್ಯಾಹ್ನ ೩ ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ರೈತರು ಹಾಗೂ ಗ್ರಾಹಕರೊಂದಿಗೆ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಆದ ಕಾರಣ ಗ್ರಾಮೀಣ ಉಪ ವಿಭಾಗದ ಕಚೇರಿಗೆ ಒಳಪಡುವ ಗ್ರಾಮಗಳ ಗ್ರಾಹಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಜಯಪುರ ಗ್ರಾಮೀಣ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
