ಬಸವನಬಾಗೇವಾಡಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎನ್ನುವ ವಿದ್ಯಾರ್ಥಿನಿಯ ಕೊಲೆ ಖಂಡನೀಯವಾಗಿದೆ. ಮಾನವ ಕುಲ ತಲೆತಗ್ಗಿಸುವಂತಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವಿಶೇಷವಾಗಿ ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಂಡ ನಂತರ ಇಂತಹ ಘಟನೆಗಳು ನಡೆಯುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡರಾದ ಸಾವಿತ್ರಿ ಕಲ್ಯಾಣಶೆಟ್ಟಿ ಎಂದು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೇಹಾ ಕೊಲೆ ಕುರಿತು ಮಾನ್ಯ ಗೃಹಮಂತ್ರಿ ಪರಮೇಶ್ವರ ಅವರು ಕೊಟ್ಟ ಹೇಳಿಕೆ ಮಹಿಳಾ ಕುಲಕ್ಕೆ ಅವಮಾನ ಮಾಡುವಂತಾಗಿದೆ. ಅಪರಾಧಿಗಳಿಗೆ ಶಿಕ್ಷೆ ಕೊಡುವುದನ್ನು ಬಿಟ್ಟು ಪರೋಕ್ಷವಾಗಿ ಬೆಂಬಲಿಸುವ ನೀತಿಯನ್ನು ಕೈ ಬಿಡಬೇಕು. ಇತ್ತೀಚೆಗೆ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿರುವುದು. ಬೆಂಗಳೂರಿನ ಕೆಫೆ ಒಂದರಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ ಘಟನೆಗಳು ನಡೆದಿವೆ. ಅಷ್ಟೇ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಯಿತು. ಇಂತಹ ಘಟನೆಗಳು ಪದೇಪದೇ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ ಎಂದು ಅರ್ಥವಾಗುತ್ತದೆ. ಇಂತಹ ಘಟನೆಗಳ ಕುರಿತು ಯಾವೊಬ್ಬ ಕಾಂಗ್ರೆಸ್ ಮುಖಂಡರು ಖಂಡಿಸದೇ ಇರುವುದು ಅವರ ಮುಖವಾಡವನ್ನು ತೋರಿಸುತ್ತದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ಸರಕಾರಕ್ಕೆ ಬುದ್ಧಿ ಹೇಳುವ ಅವಶ್ಯಕತೆ ಇಂದು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

