ನವದೆಹಲಿ: ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.
ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ENPO) ಪ್ರತಿಭಟನೆಯ ರೂಪವಾಗಿ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಪ್ರದೇಶದ ಆರು ಜಿಲ್ಲೆಗಳ ಜನರಿಗೆ ಕರೆ ಕೊಟ್ಟಿದೆ.
ಈ ಪ್ರದೇಶದ ಆರು ಜಿಲ್ಲೆಗಳ 738 ಮತಗಟ್ಟೆಗಳಲ್ಲಿ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ನಾಗಾಲ್ಯಾಂಡ್‌ನ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಅವಾ ಲೋರಿಂಗ್ ತಿಳಿಸಿದ್ದಾರೆ.
ಆರು ಜಿಲ್ಲೆಗಳಲ್ಲಿ 4 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ಅವರು ‘ಇಎನ್‌ಪಿಒ’ನೊಂದಿಗೆ ಒಗ್ಗಟ್ಟನ್ನು ತೋರಿಸಲು ಆಯ್ಕೆ ಮಾಡಿಕೊಂಡಿದ್ದು, ಮತದಾನದ ದಿನದಂದು ಮನೆಯೊಳಗೆ ಉಳಿದರು. ಮಧ್ಯಾಹ್ನ 1 ಗಂಟೆಯವರೆಗೂ ಆರು ಜಿಲ್ಲೆಗಳಲ್ಲಿ ಮತದಾರರೇ ಇರಲಿಲ್ಲ ಎಂದು ತಿಳಿದುಬಂದಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

