ಇಂಡಿ: 2024 ರ ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಪದಾಧಿಕಾರಿಗಳ, ಕಾರ್ಯಕರ್ತರ ಸಭೆ ಹಾಗೂ
ಬೃಹತ್ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಶಿವರಾಜ ಕೆಂಗನಾಳ ಪತ್ರಿಕೆ ಪ್ರಕಟಣೆಯಲ್ಲಿ ಶನಿವಾರ ತಿಳಿಸಿದ್ದಾರೆ.
ತಾಲ್ಲೂಕಿನ ತಾಂಬಾ ಪಟ್ಟಣದಲ್ಲಿ ರವಿವಾರ ಏಪ್ರಿಲ್ 21 ರಂದು ಸಂಜೆ 4-ಘಂಟೆಗೆ ತಾಂಬಾ ಬಿಜೆಪಿ ಮಾಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಜರಗುತ್ತದೆ
ಈ ಕಾರ್ಯಕ್ರಮದಲ್ಲಿ ಅಭ್ಯರ್ಥಿ ರಮೇಶ್ ಜಿಗಜಿಣಗಿ, ಮಾಜಿ ಶಾಸಕ ರಮೇಶ್ ಭೂಸನೂರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಹಾಗೂ ಬಿಜೆಪಿಯ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಹಾಗಾಗಿ ಈ ಭಾಗದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡಿದ್ದಾರೆ.
ಈ ಸಮಯದಲ್ಲಿ ಬಿಜೆಪಿ ಹಿರಿಯ ಮುಖಂಡ ಜಿ ವಾಯ್ ಗೊರನಾಳ, ತಾಲೂಕು ಪಂಚಾಯತ ಸದಸ್ಯ ಪ್ರಕಾಶ್ ಮುಂಜಿ , ರುದ್ರಪ್ಪ ನಾವದಗಿ, ಶಂಕರ ಯಳಕೋಟಿ, ಸುಭಾಷ ಪ್ಯಾಟಿ, ಮಹಾವೀರ ತಂಗಾ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

