ವಿಜಯಪುರ: ನಾವು ಚಲಾವಣೆ ಮಾಡುವ ಮತ ಬಲಿಷ್ಠ ಹಾಗೂ ಸುಸ್ಥಿರ ದೇಶ ಕಟ್ಟಲು ಸಹಾಯ ಮಾಡುತ್ತದೆ. ಯಾವುದೇ ಆಸೆ ಆಮಿಷಕ್ಕೆ ಬಲಿಯಾಗದೆ ಮತ ಚಲಾಯಿಸಿ ಎಂದು ಜಿಲ್ಲಾ ಸ್ವೀಪ್ ಸಮಿತಿ ಅದ್ಯಕ್ಷರು ಹಾಗೂ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ವಿಜಯಪುರ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವಿಜಯಪುರ ಇವರ ಸಹಯೋಗದಲ್ಲಿ ನವ ಸ್ಪೂರ್ತಿ ಸಂಘ, ಮಾಜಿ ದೇವದಾಸಿ ಪುನರ್ವಸತಿ ಯೋಜನೆ, ಏಡ್ಸ್ ಜಾಗೃತಿ ಮಹಿಳಾ ಸಂಘ ವಿಜಯಪುರ ಸಹಯೋಗದಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ “ಮತದಾನ ಜಾಗೃತಿ ಅಭಿಯಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾವು ಚುನಾಯಿಸುವ ಜನಪ್ರತಿದಿಗಳು ಆಯ್ಕೆಯಾದ ಮೇಲೆ ಆರೋಗ್ಯ, ಶಿಕ್ಷಣ, ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಯೋಜನೆಗಳನ್ನು ಹಾಕಿಕೊಂಡು ಸಮಾಜದ ಸಮಸ್ಯೆಗಳನ್ನು ನಿವಾರಿಸುತ್ತಾರೆ. ಈ ನಿಟ್ಟಿನಲ್ಲಿ ಸದೃಢ ರಾಷ್ಟç ನಿರ್ಮಾಣಕ್ಕೆ ತೊಡಗಿಸಿ ಕೊಳ್ಳುತ್ತಾರೆ. ಹಾಗಾಗಿ ಎಚ್ಚರಿಕೆ ಹಾಗೂ ಸೂಕ್ತ ರೀತಿಯಲ್ಲಿ ಉತ್ತಮ ಆಡಳಿತ ನಿರ್ಮಾಣ ಮಾಡಲು ಮತ ಚಲಾಯಿಸಿ ಎಂದು ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿಗಳಾದ ಸಿ. ಆರ್. ಮುಂಡರಗಿ ಮಾತನಾಡಿ, ಲೋಕಸಭಾ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತದಾನ ಮಾಡುವುದೂ ಸಹ ನಿಮ್ಮೆಲ್ಲರ ಹಕ್ಕು. ಮತದಾನದಲ್ಲಿ ಸಣ್ಣ ವ್ಯಕ್ತಿ ಹಾಗೂ ದೊಡ್ಡ ವ್ಯಕ್ತಿ ಎಂದು ವ್ಯತ್ಯಾಸ ಇಲ್ಲ. ಎಲ್ಲರ ಮತದಾನವು ಸಮಾನವಾಗಿರುತ್ತದೆ. ಮತಗಟ್ಟೆಗಳಲ್ಲಿ ಸಾರ್ವಜನಿಕರಿಗೆ ಎಲ್ಲ ಮೂಲಭೂತ ಸೌಲಭ್ಯಗಳಾದ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಸರತಿ ಸಾಲಿನ ವ್ಯವಸ್ಥೆ, ಹಿರಿಯ ನಾಗರಿಕರಿಗೆ ಆದ್ತೆ ನೀಡುವುದು, ವಿಶೇಷ ಚೇತನರಿಗೆ ವ್ಹೀಲ್ ಛೇರ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾರೂ ಭಯಭೀತರಾಗದೆ ಆಸೆ-ಆಮಿಷಗಳಿಗೆ ಒಳಗಾಗದಂತೆ ಪ್ರತಿಯೊಬ್ಬರೂ ಸಹ ಮತದಾನ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಮಾತನಾಡಿದರು.
ನAತರ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ ರವರು ಮಾತನಾಡಿದರು. , ರಾಯಭಾರಿ ಸಹನಾ ಕುಡಿಗನೂರ ರವರು ಎಲ್ಲರಿಗೂ ಮತದಾನ ಜಾಗೃತಿಯ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಇನ್ನೋರ್ವ ರಾಯಭಾರಿ ಸಾಕ್ಷಿ ಹಿರೇಮಠರವರು ಮತದಾನ ಜಾಗೃತಿ ಗೀತೆಗಳನ್ನು ಹಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳಾದ ಬಿ. ಎಸ್ ಮೂಗನೂರಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ. ಕೆ. ಚವ್ಹಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ರಾಜಶೇಖರ್ ಹೆಚ್ ದೈವಾಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಬಸವರಾಜ ಜಿಗಳೂರ, ಇನ್ನೋರ್ವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಸ್. ಸಿ ಮ್ಯಾಗೇರಿ, ಜಿಲ್ಲಾ ಪಂಚಾಯತಿಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಬಲಿಷ್ಠ ಹಾಗೂ ಸುಸ್ಥಿರ ದೇಶ ಕಟ್ಟಲು ಮತ ಚಲಾಯಿಸಿ :ರಿಶಿ ಆನಂದ
Related Posts
Add A Comment

